Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:3 - ಕನ್ನಡ ಸತ್ಯವೇದವು C.L. Bible (BSI)

3 ಮಗನೇ, ನೀನು ನೆರೆಯವನ ಕೈವಶವಾಗಿರುವೆ; ಈ ಪರಿಮಾಡು ತಪ್ಪಿಸಿಕೊಳ್ಳಬೇಕಾದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು; ನಡೆ, ತ್ವರೆಪಡು, ಆ ನೆರೆಯವನನ್ನು ಕಾಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಅವನ ಅಧಿಕಾರದ ಅಧೀನದಲ್ಲಿರುವೆ. ಆದ್ದರಿಂದ ಅವನ ಬಳಿಗೆ ಹೋಗಿ ನಿನ್ನನ್ನು ಸಾಲದಿಂದ ಬಿಡುಗಡೆ ಮಾಡುವಂತೆ ಬೇಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮಗನೇ, ನೀನು ನಿನ್ನ ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ, ನಿನ್ನನ್ನು ನೀನು ತಪ್ಪಿಸಿಕೊಳ್ಳಲು ಇದನ್ನು ಮಾಡು: ಹೋಗಿ ನಿನ್ನನ್ನು ನೀನು ತಗ್ಗಿಸಿಕೋ, ನಿನ್ನ ನೆರೆಯವನಿಗೆ ವಿಶ್ರಾಂತಿಯನ್ನು ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:3
8 ತಿಳಿವುಗಳ ಹೋಲಿಕೆ  

ಪ್ರಭುವಿನ ಮುಂದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ಧರಿಸುವರು.


ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II


ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು; ಸರ್ವೇಶ್ವರನ ನುಡಿಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.


ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು.


ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ನಿನ್ನ ಮಾತಿನ ಬಲೆಗೆ ಸಿಕ್ಕಿಹಾಕಿಕೊಂಡಿರುವೆ; ನಿನ್ನ ವಾಗ್ದಾನವು ನಿನ್ನನ್ನು ಸೆರೆಹಿಡಿದಿದೆ.


ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನಾಕಣ್ಣಿನ ರೆಪ್ಪೆಗಳನ್ನು ಮುಚ್ಚಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು