Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:32 - ಕನ್ನಡ ಸತ್ಯವೇದವು C.L. Bible (BSI)

32 ವ್ಯಭಿಚಾರಿಯು ಕೇವಲ ಬುದ್ಧಿಶೂನ್ಯನು; ತನ್ನೀ ಕೃತ್ಯದಿಂದ ಸ್ವನಾಶಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ವ್ಯಭಿಚಾರಿಯೋ ಕೇವಲ ಬುದ್ಧಿಶೂನ್ಯನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:32
25 ತಿಳಿವುಗಳ ಹೋಲಿಕೆ  

ಜನಸಾಮಾನ್ಯರ ನಡುವೆ, ಯೌವನಸ್ಥರ ಮಧ್ಯೆ ಮತಿಗೆಟ್ಟ ಯುವಕನೊಬ್ಬ ನಡೆವುದನ್ನು ನಾನು ಕಂಡೆ.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ಈತನಿಗಿಂತ ಯೋಗ್ಯವಾದ ವ್ಯಕ್ತಿ ನಮಗೆ ಸಿಕ್ಕುವುದು ಸಾಧ್ಯವೆ?” ಎಂದು ಹೇಳಿ ಜೋಸೆಫನಿಗೆ, “ದೇವರೇ ನಿನಗೆ ಇದನ್ನೆಲ್ಲ ತಿಳಿಸಿರುವುದರಿಂದ ನಿನಗೆ ಸಮಾನವಾದ ಬುದ್ಧಿವಿವೇಕಗಳುಳ್ಳ ವ್ಯಕ್ತಿ ಯಾವನೂ ಇಲ್ಲ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ಅತ್ತಿತ್ತ ಓಡಾಡುವ ಕೊಬ್ಬಿದ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನೂ ಕೆನೆಯುತ್ತಾನೆ ತನ್ನ ನೆರೆಯವನ ಹೆಂಡತಿಯನ್ನು ನೋಡಿ !


“ಮುಗ್ಧಮನಸ್ಕರು ಯಾರಾದರೂ ಇದ್ದರೆ ಇತ್ತ ಬರಲಿ” ಎಂದು ಪ್ರಕಟಿಸುತ್ತಾಳೆ.


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


“ಇಸ್ರಯೇಲ್, ನಿನ್ನನ್ನು ನಾಶಮಾಡುವೆನು, ನಿನಗೆ ನೆರವಾಗಬಲ್ಲವರು ಯಾರು?


ಪೆಟ್ಟಿಗೂ ಅಪಕೀರ್ತಿಗೂ ಅವನು ಪಾತ್ರನು; ಅವನಿಗಾಗುವ ಅವಮಾನ ತೊಲಗದು ಎಂದಿಗು.


ಬುದ್ಧಿವಂತನ ಬಾಯಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.


ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.


ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ.


ಉತ್ತು ವ್ಯವಸಾಯ ಮಾಡುವವನು ಹೊಟ್ಟೆತುಂಬ ಉಣ್ಣುವನು; ವ್ಯರ್ಥಕಾರ್ಯಗಳಲ್ಲಿ ಆಸಕ್ತಿಯುಳ್ಳವನು ಮತಿಹೀನನು.


ಸೋಮಾರಿಯ ಹೊಲದ ಮೇಲೆ ನಡೆದುಹೋದೆ; ಮತಿಗೆಟ್ಟವನ ತೋಟದ ಮೇಲೆ ಹಾದುಹೋದೆ.


ಜ್ಞಾನದ ಕಡೆಗೆ ಕಿವಿಗೊಡು, ವಿವೇಕದ ಕಡೆಗೆ ಮನತಿರುಗಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು