Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:34 - ಕನ್ನಡ ಸತ್ಯವೇದವು C.L. Bible (BSI)

34 ಏಕೆಂದರೆ, ಅವಳ ಪತಿಗಾಗುವ ಮತ್ಸರ ಉದ್ರೇಕಗೊಳ್ಳುವುದು; ಕನಿಕರ ತೋರನು, ಮುಯ್ಯಿ ತೀರಿಸುವ ದಿನದಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆಕೆಯ ಗಂಡನು ಮತ್ಸರದಿಂದ ಬಹು ಕೋಪಗೊಳ್ಳುವನು; ಕರುಣೆತೋರದೆ ಅವಳ ಮೇಲೆ ಸೇಡುತೀರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು. ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:34
12 ತಿಳಿವುಗಳ ಹೋಲಿಕೆ  

ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರದ ಮುಂದೆ ನಿಲ್ಲಬಲ್ಲವರಾರು?


ಅಥವಾ ಹಾಗೆ ಮಾಡದೆ ಕೆಟ್ಟುಹೋಗದೆ ಇದ್ದರೂ ಕೆಟ್ಟುಹೋದಳೆಂದು ಗಂಡನ ಸಂಶಯಕ್ಕೆ ಗುರಿಯಾಗಿರಬಹುದು.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


“ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಇಸ್ರಯೇಲರ ಮೇಲೆ ನನಗಿದ್ದ ಕೋಪವನ್ನು ತೊಲಗಿಸಿದ್ದಾನೆ. ನನ್ನ ಬಗ್ಗೆ ಅವನೊಬ್ಬನೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾನೆ. ನನ್ನ ಗೌರವವನ್ನು ಕಾಪಾಡಿಕೊಳ್ಳಲು ಇನ್ನು ಇಸ್ರಯೇಲರನ್ನು ನಿರ್ಮೂಲ ಮಾಡಬೇಕಾದ ಅಗತ್ಯವಿಲ್ಲ.


“ನಿಮ್ಮ ಸೇವಕ ನನಗೆ ಹೀಗೆ ಮಾಡಿದ,” ಎಂಬ ಆಕೆಯ ಮಾತನ್ನು ಕೇಳಿ ಜೋಸೆಫನ ದಣಿ ಕಿಡಿಕಿಡಿಯಾದ.


ಪೆಟ್ಟಿಗೂ ಅಪಕೀರ್ತಿಗೂ ಅವನು ಪಾತ್ರನು; ಅವನಿಗಾಗುವ ಅವಮಾನ ತೊಲಗದು ಎಂದಿಗು.


ಯಾವ ಪ್ರಾಯಶ್ಚಿತ್ತಕ್ಕೂ ಅವನು ಒಪ್ಪನು; ಎಷ್ಟು ಲಂಚಕೊಟ್ಟರೂ ಒಲಿಯನು, ಮಣಿಯನು.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


“ಇಗೋ, ಬಾಬಿಲೋನಿಯದ ಜನರಿಗೆ ವಿರುದ್ಧವಾಗಿ ಮೇದ್ಯರನ್ನು ಎತ್ತಿಕಟ್ಟುವೆನು. ಇವರು ಬೆಳ್ಳಿಬಂಗಾರಕ್ಕೆ ಮಾರುಹೋಗರು.


ಮುಂದೆ, ತಾನು ಗರ್ಭಧರಿಸಿದ್ದು ಗೊತ್ತಾದಾಗ ಆಕೆ ದಾವೀದನಿಗೆ ಸಮಾಚಾರ ಕಳುಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು