Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:1 - ಕನ್ನಡ ಸತ್ಯವೇದವು C.L. Bible (BSI)

1 ಮಗನೇ, ನನ್ನ ಮಾತುಗಳನ್ನು ಅನುಸರಿಸು, ನನ್ನ ಆಜ್ಞೆಗಳನ್ನು ಮನಸ್ಸಿನಲ್ಲಿ ಇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಂದಾ, ನನ್ನ ಮಾತುಗಳನ್ನು ಅನುಸರಿಸು, ನನ್ನ ಆಜ್ಞೆಗಳನ್ನು ಮನಸ್ಸಿನಲ್ಲಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಮಗನೇ, ನನ್ನ ಮಾತುಗಳನ್ನು ಜ್ಞಾಪಕಮಾಡಿಕೋ, ನನ್ನ ಆಜ್ಞೆಗಳನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮಗನೇ, ನನ್ನ ಮಾತುಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:1
16 ತಿಳಿವುಗಳ ಹೋಲಿಕೆ  

ಮಗನೇ, ನಿನ್ನ ತಂದೆಯ ಬೋಧೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದಿರು.


ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ಆತನ ಬಾಯಿಂದ ಬುದ್ಧಿ ಕಲಿತುಕೊ ಆತನ ಮಾತನು ಹೃದಯದಲ್ಲಿಟ್ಟುಕೊ.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ಈ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ, ನಿಮಗೆ ಶಾಪ ತಗಲುವುದು.


ಬುದ್ಧಿವಂತರು ಜ್ಞಾನದ ಭಂಡಾರಿಗಳು; ಮೂರ್ಖನ ಮಾತುಗಳು ವಿನಾಶದ ಸೋಪಾನಗಳು.


ಅವು ನಿನ್ನ ಕಣ್ಣಿಗೆ ಮರೆಯಾಗದಿರಲಿ, ನಿನ್ನ ಹೃದಯದೊಳಗೆ ಭದ್ರವಾಗಿರಲಿ.


ಮಗನೇ, ನಿನ್ನ ತಂದೆಯ ಆಜ್ಞೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದೆ ಮಾಡು.


ಯಾವ ಪ್ರಾಯಶ್ಚಿತ್ತಕ್ಕೂ ಅವನು ಒಪ್ಪನು; ಎಷ್ಟು ಲಂಚಕೊಟ್ಟರೂ ಒಲಿಯನು, ಮಣಿಯನು.


ಅವಳ ಕಾಲುಗಳು ಮರಣದತ್ತ ಇಳಿಯುತ್ತವೆ, ಹೆಜ್ಜೆಗಳು ಪಾತಾಳದತ್ತ ಕೊಂಡೊಯ್ಯುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು