Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:12 - ಕನ್ನಡ ಸತ್ಯವೇದವು C.L. Bible (BSI)

12 ಹೊಂಚುಹಾಕುತ್ತಾಳೆ ಅವಳು ಮೂಲೆ ಮೂಲೆಗಳಲ್ಲಿ; ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು, ಅಂತು ಪ್ರತಿಯೊಂದು ಮೂಲೆಯಲ್ಲಿಯೂ ಹೊಂಚು ಹಾಕುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು, ಅಂತು ಪ್ರತಿಯೊಂದು ಮೂಲೆಯಲ್ಲಿಯೂ ಹೊಂಚುಹಾಕುವಳು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವಳು ಪ್ರತಿಯೊಂದು ಮೂಲೆಯಲ್ಲೂ ಗಂಡಸರನ್ನು ಬಲೆಗೆ ಹಾಕಿಕೊಳ್ಳಲು ಕಾದುಕೊಂಡಿರುವಳು. ಅವಳು ಬೀದಿಗಳಲ್ಲಿ ನಡೆದು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ ಹೀಗೆ ಅವಳು ಮೂಲೆ ಮೂಲೆಗೂ ಹೊಂಚು ಹಾಕುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:12
11 ತಿಳಿವುಗಳ ಹೋಲಿಕೆ  

ಆಕೆ ಕಳ್ಳನಂತೆ ಹೊಂಚುಹಾಕುತ್ತಾಳೆ; ಅನೇಕರನ್ನು ದ್ರೋಹಿಗಳನ್ನಾಗಿಸುತ್ತಾಳೆ.


ಅವಳು ತನ್ನ ಮನೆಯ ಬಾಗಿಲಲ್ಲಿ ಕುಳಿತು, ನಗರದ ಹೆದ್ದಾರಿಯ ದಿಣ್ಣೆಯ ಮೇಲೆ ನಿಂತು,


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ಒಂದೊಂದು ಬೀದಿಯ ಕೊನೆಯಲ್ಲೂ ನೀನು ಮಂಟಪವನ್ನು ಕಟ್ಟಿ ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಇದು ಕಡಿಮೆಯೆಂದು ತಿರಸ್ಕರಿಸುವ ಸೂಳೆಯಂತೆ ನೀನು ನಡೆಯುವವಳಲ್ಲ.


ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.


ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.


ನೀವು ನಿಮ್ಮ ನಲ್ಲನಲ್ಲೆಯರನ್ನು ಹುಡುಕಿಕೊಂಡು ಹೋಗುವುದರಲ್ಲಿ ಎಷ್ಟೋ ನಿಪುಣರು ! ಬಲು ಕೆಟ್ಟ ಹೆಂಗಸು ಕೂಡ ನಿಮ್ಮಿಂದ ಕಲಿತುಕೊಳ್ಳಬಹುದಾಗಿದೆ.


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ಹೊತ್ತು ಮೀರಿ, ಸಂಜೆಯಾಗಿ, ಕತ್ತಲು ಕವಿದಿದ್ದಾ ರಾತ್ರಿಯಲ್ಲಿ, ಅವನು ಹಾದುಹೋಗುತ್ತಿದ್ದ ಬೀದಿಯ ಮೂಲೆ ಮನೆಯ ಬಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು