Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:2 - ಕನ್ನಡ ಸತ್ಯವೇದವು C.L. Bible (BSI)

2 ಕನೀನಿಕೆಯಂತೆ ನನ್ನ ಕಟ್ಟಳೆಯನ್ನು ಪಾಲಿಸು, ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಉಪದೇಶವನ್ನು ಕಣ್ಣುಗುಡ್ಡಿನಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಜೀವಿಸುವೆ. ನಿನ್ನ ಕಣ್ಣುಗುಡ್ಡೆಗಳೋ ಎಂಬಂತೆ ನನ್ನ ಉಪದೇಶಗಳಿಗೆ ಎಚ್ಚರಿಕೆಯಿಂದ ವಿಧೇಯನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಆಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣುಗುಡ್ಡೆಯಂತೆ ನನ್ನ ಕಟ್ಟಳೆಗಳನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:2
16 ತಿಳಿವುಗಳ ಹೋಲಿಕೆ  

ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ I ಸುತ್ತುವರೆದಿರುವ ಪ್ರಾಣ ವೈರಿಗಳಿಂದ I ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು I ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು II


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.


ಬರಿದಾದ ಭೀಕರ ಮರುಭೂಮಿಯಲಿ ಅವರನು ಕಂಡು ಕಣ್ಣಗುಡ್ಡೆಯಂತೆ ಕಾಪಾಡಿದ ಪ್ರೀತಿಯಿಂದವರನು ಅಪ್ಪಿಕೊಂಡು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ಅವು ನಿನ್ನ ಕಣ್ಣಿಗೆ ಮರೆಯಾಗದಿರಲಿ, ನಿನ್ನ ಹೃದಯದೊಳಗೆ ಭದ್ರವಾಗಿರಲಿ.


ನೀತಿಯುತ ಹಾಗೂ ಶಾಶ್ವತ ನಿನ್ನಾ ಶಾಸನ I ನಾ ಜೀವಿಸುವಂತೆ ದಯಪಾಲಿಸೆನಗೆ ಸುಜ್ಞಾನ II


ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು