Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:26 - ಕನ್ನಡ ಸತ್ಯವೇದವು C.L. Bible (BSI)

26 ಅವಳಿಗೆ ಬಲಿಯಾಗಿ ಬಿದ್ದವರು ಬಹುಮಂದಿ; ಹತರಾದವರೋ ಲೆಕ್ಕವಿಲ್ಲದಷ್ಟು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವಳಿಂದ ಗಾಯಪಟ್ಟು ಬಿದ್ದವರು ಬಹು ಜನರು, ಹತರಾದವರೋ ಲೆಕ್ಕವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವಳಿಂದ ಗಾಯಪಟ್ಟು ಬಿದ್ದವರು ಬಹುಮಂದಿ, ಹತರಾದವರೋ ಲೆಕ್ಕವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಕೆಯಿಂದ ಅನೇಕ ಗಂಡಸರು ಬಿದ್ದುಹೋಗಿದ್ದಾರೆ; ಅವಳು ಅನೇಕ ಗಂಡಸರನ್ನು ನಾಶಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ಅನೇಕರು ಅವಳಿಗೆ ಬಲಿಯಾಗಿ ಬಿದ್ದಿದ್ದಾರೆ. ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:26
14 ತಿಳಿವುಗಳ ಹೋಲಿಕೆ  

“ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಅವರಲ್ಲಿ ಕೆಲವರು ಹಾದರಮಾಡಿದ್ದರಿಂದ ಒಂದೇ ದಿನದಲ್ಲಿ ಇಪ್ಪತ್ತಮೂರು ಸಾವಿರಮಂದಿ ಸತ್ತರು. ನಾವು ಹಾದರದಿಂದ ದೂರವಿರಬೇಕು.


ಪೆಟ್ಟಿಗೂ ಅಪಕೀರ್ತಿಗೂ ಅವನು ಪಾತ್ರನು; ಅವನಿಗಾಗುವ ಅವಮಾನ ತೊಲಗದು ಎಂದಿಗು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


ಅವನಿಗೆ ತಿಳಿಯದು ಅವಳ ಮನೆ ಪ್ರೇತನಿವಾಸವೆಂದು, ಅವಳ ಅತಿಥಿಗಳು ಬಿದ್ದಿರುವುದು ಅಗಾಧ ಪಾತಾಳದಲ್ಲೆಂದು.


ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ.


ಅವಳ ಮನೆ ಪಾತಾಳಕ್ಕಿಳಿಸುವ ದಾರಿ, ಅವಳ ಮಾರ್ಗ ಪ್ರೇತಲೋಕಕ್ಕೆ ಹಾದಿ.


ಆಕೆ ಕಳ್ಳನಂತೆ ಹೊಂಚುಹಾಕುತ್ತಾಳೆ; ಅನೇಕರನ್ನು ದ್ರೋಹಿಗಳನ್ನಾಗಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು