Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:27 - ಕನ್ನಡ ಸತ್ಯವೇದವು C.L. Bible (BSI)

27 ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವಳ ಮನೆಯು ಪಾತಾಳದ ಮಾರ್ಗದಲ್ಲಿದೆ. ಅವಳ ದಾರಿ ನೇರವಾಗಿ ಮರಣಕ್ಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವಳ ಮನೆಯು ಪಾತಾಳಕ್ಕೆ ಹೆದ್ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:27
8 ತಿಳಿವುಗಳ ಹೋಲಿಕೆ  

ಅವಳ ಕಾಲುಗಳು ಮರಣದತ್ತ ಇಳಿಯುತ್ತವೆ, ಹೆಜ್ಜೆಗಳು ಪಾತಾಳದತ್ತ ಕೊಂಡೊಯ್ಯುತ್ತವೆ.


ಅವನಿಗೆ ತಿಳಿಯದು ಅವಳ ಮನೆ ಪ್ರೇತನಿವಾಸವೆಂದು, ಅವಳ ಅತಿಥಿಗಳು ಬಿದ್ದಿರುವುದು ಅಗಾಧ ಪಾತಾಳದಲ್ಲೆಂದು.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


ಹೊತ್ತು ಮೀರಿ, ಸಂಜೆಯಾಗಿ, ಕತ್ತಲು ಕವಿದಿದ್ದಾ ರಾತ್ರಿಯಲ್ಲಿ, ಅವನು ಹಾದುಹೋಗುತ್ತಿದ್ದ ಬೀದಿಯ ಮೂಲೆ ಮನೆಯ ಬಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು