Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:3 - ಕನ್ನಡ ಸತ್ಯವೇದವು C.L. Bible (BSI)

3 ಅವು ನಿನ್ನ ಬೆರಳಿಗೆ ಉಂಗುರವಾಗಿರಲಿ, ನಿನ್ನ ಹೃದಯದ ಹಲಗೆಯಲ್ಲಿ ಬರೆದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಇಟ್ಟುಕೋ, ಹೃದಯದ ಹಲಗೆಯಲ್ಲಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವುಗಳನ್ನು ನಿನ್ನ ಬೆರಳುಗಳ ಸುತ್ತಲೂ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿಟ್ಟುಕೋ; ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:3
11 ತಿಳಿವುಗಳ ಹೋಲಿಕೆ  

ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಸರ್ವೇಶ್ವರ ನನಗೆ ಇಂತೆಂದರು : “ನೀನು ಈಗಲೇ ಹೋಗಿ, ನಾನು ಹೇಳುವುದನ್ನು ಅವರೆದುರಿನಲ್ಲಿಯೆ ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ. ಅದು ಮುಂದಿನ ಕಾಲಕ್ಕೆ - ಶಾಶ್ವತ ಸಾಕ್ಷಿಯಾಗಿರಲಿ.


ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ಅವನ್ನು ನಿರಂತರವಾಗಿ ಹೃದಯಕ್ಕೆ ಬಂಧಿಸಿಕೊ; ಕಂಠಾಭರಣವಾಗಿ ಕೊರಳಿಗೆ ಧರಿಸಿಕೊ.


ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ : “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.


ಜ್ಞಾನವನ್ನು ‘ಅಕ್ಕಾ’ ಎಂದು ಕರೆ; ವಿವೇಕವನ್ನು ಆಪ್ತಳೆಂದು ಬಗೆ.


ಅವು ನಿನ್ನ ಕಣ್ಣಿಗೆ ಮರೆಯಾಗದಿರಲಿ, ನಿನ್ನ ಹೃದಯದೊಳಗೆ ಭದ್ರವಾಗಿರಲಿ.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು