Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:11 - ಕನ್ನಡ ಸತ್ಯವೇದವು C.L. Bible (BSI)

11 ಜ್ಞಾನವೆಂಬುದು ಹವಳಕ್ಕಿಂತ ಶ್ರೇಷ್ಠ, ಇಷ್ಟವಸ್ತುಗಳಾವುವು ಅದಕ್ಕೆ ಸಾಟಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಮನುಷ್ಯನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:11
14 ತಿಳಿವುಗಳ ಹೋಲಿಕೆ  

ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II


ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.


ಹೊನ್ನು ಉಂಟು, ಹವಳದ ರಾಶಿ ಉಂಟು; ಆದರೆ ತಿಳುವಳಿಕೆಯುಳ್ಳ ತುಟಿಗಳು ಬೆಲೆಮೀರಿದ ಆಭರಣಗಳು.


ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II


ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು.


ಜ್ಞಾನವು ಆಸ್ತಿಗಿಂತ ಪ್ರಯೋಜನಕರ; ಜೀವಿತರಿಗೆ ಅದು ಎಷ್ಟೋ ಲಾಭಕರ.


ಇದು ಸಮುದ್ರದ ಆಚೆ ಇರುವ ಮಾತಲ್ಲ; ‘ನಮಗಾಗಿ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು