Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:13 - ಕನ್ನಡ ಸತ್ಯವೇದವು C.L. Bible (BSI)

13 ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:13
27 ತಿಳಿವುಗಳ ಹೋಲಿಕೆ  

ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸು, ಕೆಟ್ಟನುಡಿಗಳನ್ನು ಬಾಯಿಂದ ದೂರಮಾಡು.


ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ದುರುಳನೂ ನೀಚನೂ ಆದವನ ನಡತೆಯನ್ನು ನೋಡು: ಅವನ ಬಾಯಿಂದ ಹೊರಡುವುದು ಕುಟಿಲ ಮಾತು.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ನಿಮ್ಮಲ್ಲಿ ಯಾರೂ ನೆರೆಯವನಿಗೆ ಕೇಡು ಬಗೆಯದಿರಲಿ. ಸುಳ್ಳುಸಾಕ್ಷ್ಯಕ್ಕೆ ಎಂದೂ ಸಂತೋಷಿಸಬೇಡಿ. ಇದೆಲ್ಲ ನನಗೆ ಅಸಹ್ಯ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II


ಸಜ್ಜನರ ಬಾಯಲ್ಲಿ ಜ್ಞಾನ ಮೊಳೆಯುವುದು; ನೀಚನ ನಾಲಿಗೆಯೂ ಕತ್ತರಿಸಿ ಹೋಗುವುದು.


ವಿವೇಕಿಯಾದೆನು ನಿನ್ನ ನಿಯಮಗಳ ಮೂಲಕ I ದ್ವೇಷಿಸುತಿಹೆನು ಪ್ರತಿಯೊಂದು ಮಿಥ್ಯಾ ಮಾರ್ಗ II


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ದುರುಳರ ನಡತೆ ಸರ್ವೇಶ್ವರನಿಗೆ ಹೇಯ; ನೀತಿವಂತರ ನಡತೆ ಆತನಿಗೆ ಸುಪ್ರಿಯ.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


ಆದರೆ ಆ ಸೂಲಗಿತ್ತಿಯರು ದೈವಭಕ್ತರು. ಈಜಿಪ್ಟಿನ ಅರಸ ಹೇಳಿದಂತೆ ಮಾಡದೆ ಗಂಡುಮಕ್ಕಳನ್ನು ಉಳಿಸಿದರು.


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಗರ್ವಿಷ್ಠನು ಯಾರೇ ಆಗಿರಲಿ, ಅವನು ಸರ್ವೇಶ್ವರನಿಗೆ ಅಸಹ್ಯ; ಅವನಿಗೆ ದಂಡನೆ ತಪ್ಪದು, ಇದು ಖಂಡಿತ.


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು