Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:15 - ಕನ್ನಡ ಸತ್ಯವೇದವು C.L. Bible (BSI)

15 ರಾಜರು ಆಳುವುದು ನನ್ನ ಸಹಾಯದಿಂದ ಅಧಿಪತಿಗಳು ನ್ಯಾಯತೀರ್ಪು ಮಾಡುವುದು ನನ್ನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಸಹಾಯದಿಂದ ರಾಜರುಗಳು ರಾಜ್ಯವಾಳುವರು; ಅಧಿಪತಿಗಳು ನ್ಯಾಯವಾದ ಕಾನೂನುಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಮೂಲಕ ರಾಜರು ಆಳುವರು; ಪ್ರಧಾನರು ನ್ಯಾಯವಾದ ತೀರ್ಪು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:15
27 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನು ತನ್ನ ಮೇಲಿನ ಅಧಿಕಾರಿಗಳಿಗೆ ಅಧೀನನಾಗಿರಬೇಕು. ಅಧಿಕಾರವೆಲ್ಲವೂ ಬರುವುದು ದೇವರಿಂದಲೇ. ಈಗಿರುವ ಅಧಿಕಾರಿಗಳೂ ದೇವರಿಂದಲೇ ನೇಮಕಗೊಂಡವರು.


ಕಾಲಗಳು ಋತುಗಳು ಆತನ ಕೈಯಲ್ಲಿವೆ ರಾಜರನ್ನು ಕೆಳಕ್ಕಿಳಿಸುವವನು, ಮೇಲೆ ನಿಲ್ಲಿಸುವವನು ಆತನೆ. ಜ್ಞಾನಿಗಳ ಜ್ಞಾನ, ವಿವೇಕಿಗಳ ವಿವೇಕ ಆತನ ಕೊಡುಗೆ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ತಾವು ಮಾನವ ಸಮಾಜದಿಂದ ಬಹಿಷ್ಕೃತರಾಗುವಿರಿ. ಕಾಡುಮೃಗಗಳ ನಡುವೆ ವಾಸಮಾಡುವಿರಿ. ದನಕರುಗಳಂತೆ ಹುಲ್ಲು ಮೇಯುವ ಗತಿ ನಿಮ್ಮದಾಗುವುದು. ಆಕಾಶದ ಇಬ್ಬನಿ ನಿಮ್ಮನ್ನು ತೋಯಿಸುವುದು. ಪರಾತ್ಪರ ದೇವರಿಗೆ ಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದು ತಮಗೆ ತಿಳಿದುಬರುವುದರೊಳಗೆ ಏಳು ವರ್ಷ ಕಳೆದಿರುತ್ತದೆ.


ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.


ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ಸಮುವೇಲನು ಸೌಲನನ್ನು ಕಂಡಾಗ ಸರ್ವೇಶ್ವರ ಅವನಿಗೆ, “ನಾನು ತಿಳಿಸಿದ್ದ ವ್ಯಕ್ತಿ ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು,” ಎಂದು ಸೂಚಿಸಿದರು.


ನಿಮ್ಮ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವುದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಇವರನ್ನು ಪರಿಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳನ್ನು ನನಗೆ ಅನುಗ್ರಹಿಸಿರಿ,” ಎಂದು ದೇವರನ್ನು ಬೇಡಿಕೊಂಡನು.


ಎಂತಲೇ ವಿವೇಕಿಗಳಾಗಿರಿ, ರಾಜರುಗಳೇ, I ಬುದ್ಧಿವಾದಕೆ ಕಿವಿಗೊಡಿ, ದೇಶಾಧಿಪತಿಗಳೇ II


ನನ್ನ ಮೂಲಕ ಭೂಪತಿಗಳು ರಾಜ್ಯ ಆಳುವರು ನಾಯಕರು ಭೂಮಿಯ ಮೇಲೆ ದೊರೆತನ ಮಾಡುವರು.


ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ.


ಆಗ ದೇವರು ಸೊಲೊಮೋನನಿಗೆ, “ನೀನು ಘನಧನೈಶ್ವರ್ಯಗಳನ್ನಾಗಲಿ, ಶತ್ರುಗಳ ವಿನಾಶವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳಲಿಲ್ಲ. ಬದಲಿಗೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ನಿನಗಾಗಿ ಬೇಡಿಕೊಂಡೆ. ಆದುದರಿಂದ ಅವು ನಿನಗೆ ದೊರಕುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು