Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:24 - ಕನ್ನಡ ಸತ್ಯವೇದವು C.L. Bible (BSI)

24 ಜಲನಿಧಿಗಳಾಗಲಿ, ನೀರಿನ ಬುಗ್ಗೆಗಳಾಗಲಿ ಇಲ್ಲದಿರುವಾಗಲೆ ನಾ ಬಂದೆ ಜನ್ಮತಾಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಜಲನಿಧಿಗಳಾಗಲಿ ನೀರುತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ಸಾಗರಗಳಿಗಿಂತ ಮೊದಲೇ ಜನಿಸಿದೆನು; ಬುಗ್ಗೆಗಳ ನೀರು ಉಂಟಾಗುವುದಕ್ಕಿಂತ ಮೊದಲೇ ಜನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗಾಧಗಳು ಇಲ್ಲದೆ ಇರುವಾಗ ನಾನು ಹುಟ್ಟಿ ಬಂದೆನು, ನೀರಿನ ಬುಗ್ಗೆಗಳು ಇಲ್ಲದೆ ಇರುವಾಗಲೇ ನಾನಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:24
10 ತಿಳಿವುಗಳ ಹೋಲಿಕೆ  

ಆತನ ಜ್ಞಾನದಿಂದಲೆ ಅಡಿಸಾಗರ ಒಡೆಯುತ್ತದೆ ಆಕಾಶಮಂಡಲ ಇಬ್ಬನಿಯನ್ನು ಸುರಿಸುತ್ತದೆ.


ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.


ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.


ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?


ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ಮುಚ್ಚಿಬಿಟ್ಟಿತವರನು ಸಮುದ್ರ ಸಾಗರವು ಸೇರಿದರವರು ಕಲ್ಲಿನೋಪಾದಿ ಕಡಲಿನ ತಳವನು.


ನೀನೆಂದಾದರು ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು