Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:27 - ಕನ್ನಡ ಸತ್ಯವೇದವು C.L. Bible (BSI)

27 ನಾನು ಅಲ್ಲಿದ್ದೆ ಆತ ಆಕಾಶಮಂಡಲವನ್ನು ಸ್ಥಾಪಿಸುವಾಗ ಸಾಗರದ ಮೇಲೆ ಚಕ್ರಾಕಾರದ ಗೆರೆಯನ್ನು ಎಳೆವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು, ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು ಸಾಗರದ ಮೇಲೆ ಚಕ್ರಾಕಾರವಾದ ಗೀಟನ್ನು ಎಳೆದು ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನು ಆಕಾಶವನ್ನು ಸೃಷ್ಟಿಸಿದ ಸಮಯದಲ್ಲಿ ಜ್ಞಾನವೆಂಬ ನಾನು ಅಲ್ಲಿದ್ದೆನು. ಆತನು ಸಾಗರದ ಎಲ್ಲೆಗಳನ್ನು ಗೊತ್ತುಪಡಿಸಿದಾಗ ಜ್ಞಾನವೆಂಬ ನಾನು ಅಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ಆಕಾಶಗಳನ್ನು ಸಿದ್ಧಪಡಿಸಿದಾಗ ಸಾಗರದ ಮೇಲೆ ಚಕ್ರವನ್ನು ಹಾಕಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:27
12 ತಿಳಿವುಗಳ ಹೋಲಿಕೆ  

ಬೆಳಕು-ಕತ್ತಲು ಸಂಧಿಸುವ ಸ್ಥಾನದಲಿ ಮೇರೆಹಾಕಿದ್ದಾನೆ ಸಮುದ್ರದ ಸುತ್ತಲಲಿ.


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ಸರ್ವೇಶ್ವರಸ್ವಾಮಿ ಜ್ಞಾನದ ಮೂಲಕ ಜಗವನ್ನು ಸ್ಥಾಪಿಸಿದ ವಿವೇಕದ ಮುಖಾಂತರ ಗಗನವನ್ನು ಸ್ಥಿರಗೊಳಿಸಿದ.


ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಜ್ಞಾನದಿಂದ ಜಗವನು ನಿರ್ಮಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು I ಎಲ್ಲದರ ಮೇಲೆ ನಡೆಸುತಿಹನು ರಾಜ್ಯಾಡಳಿತವನು II


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ನಾನು ಜನಿಸಿದೆ ಭೂಮಿಯನ್ನಾಗಲಿ, ಬೈಲನ್ನಾಗಲಿ ನೆಲದ ಅಣುರೇಣನ್ನಾಗಲಿ ಆತ ನಿರ್ಮಿಸದೆ ಇರುವಾಗಲೆ.


ಗಗನವನ್ನು ಮೇಲೆ ಸ್ಥಿರಪಡಿಸುವಾಗ ಸಾಗರದ ಸೆಲೆಗಳನ್ನು ನೆಲೆಗೊಳಿಸಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು