Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:29 - ಕನ್ನಡ ಸತ್ಯವೇದವು C.L. Bible (BSI)

29 ಜಲಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇಮಿಸುವಾಗ ಭೂಮಿಯ ಅಸ್ತಿಭಾರವನ್ನು ಗೊತ್ತುಮಾಡುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇವಿುಸಿ ಭೂವಿುಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪ್ರವಾಹಗಳು ತನ್ನ ಆಜ್ಞೆಯನ್ನು ಮೀರದಂತೆ ಸಮುದ್ರಕ್ಕೆ ಅವರು ಮೇರೆಯನ್ನು ಮಾಡಿ ಭೂಮಿಯ ಅಸ್ತಿವಾರಗಳನ್ನು ನೇಮಿಸಿದಾಗ, ನಾನು ಅಲ್ಲಿ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:29
11 ತಿಳಿವುಗಳ ಹೋಲಿಕೆ  

ಗೊತ್ತುಮಾಡಿರುವೆ ಆ ಜಲರಾಶಿಗೆ ಮೇರೆಯನು I ಅವು ಮತ್ತೆ ಮುಚ್ಚದಂತೆ ಮಾಡಿರುವೆ ಭೂಮಿಯನು II


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ಬುವಿಯನು ತಳಹದಿಯ ಮೇಲೆ ಸ್ಥಾಪಿಸಿರುವೆ I ಅದೆಂದಿಗೂ ಕದಲದಂತೆ ಮಾಡಿರುವೆ II


ತುಂಬಿಟ್ಟಿಹನು ಜಲರಾಶಿಗಳನು ಕಡಲೆಂಬ ಕುಡಿಕೆಯಲಿ I ಕೂಡಿಟ್ಟಿಹನು ಜಲಾಶಯಗಳನು ಬುವಿಯುಗ್ರಾಣದಲಿ II


ಬೆಳಕು-ಕತ್ತಲು ಸಂಧಿಸುವ ಸ್ಥಾನದಲಿ ಮೇರೆಹಾಕಿದ್ದಾನೆ ಸಮುದ್ರದ ಸುತ್ತಲಲಿ.


ಗಗನವನ್ನು ಮೇಲೆ ಸ್ಥಿರಪಡಿಸುವಾಗ ಸಾಗರದ ಸೆಲೆಗಳನ್ನು ನೆಲೆಗೊಳಿಸಿದಾಗ,


ಜ್ಞಾನದಿಂದ ಜಗವನು ನಿರ್ಮಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಸರ್ವೇಶ್ವರಸ್ವಾಮಿ ಜ್ಞಾನದ ಮೂಲಕ ಜಗವನ್ನು ಸ್ಥಾಪಿಸಿದ ವಿವೇಕದ ಮುಖಾಂತರ ಗಗನವನ್ನು ಸ್ಥಿರಗೊಳಿಸಿದ.


ಅದಕ್ಕೆ ಪಿಲಾತನು, “ನಾನು ಬರೆದುದು ಬರೆದಾಯಿತು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು