Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:34 - ಕನ್ನಡ ಸತ್ಯವೇದವು C.L. Bible (BSI)

34 ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಲಿನ ನಿಲವುಗಳ ಹತ್ತಿರ ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನನಗೆ ಕಿವಿಗೊಡುವವನು ಧನ್ಯನಾಗಿದ್ದಾನೆ. ಅವನು ಪ್ರತಿದಿನ ನನ್ನ ಮನೆಬಾಗಿಲುಗಳ ಬಳಿಯಲ್ಲೂ ನನ್ನ ಬಾಗಿಲಿನ ನಿಲುವುಗಳ ಬಳಿಯಲ್ಲೂ ಕಾದುಕೊಂಡಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, ನನ್ನ ಬಾಗಿಲುಗಳ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, ನನ್ನ ಮಾತುಗಳನ್ನು ಕೇಳುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:34
17 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.


ಜ್ಞಾನವನ್ನು ಕಂಡು ಹಿಡಿಯುವವನು ಧನ್ಯನು, ವಿವೇಕವನ್ನು ಗಳಿಸುವವನು ಭಾಗ್ಯವಂತನು.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಪೇಟೆಯ ಜನಜಂಗುಳಿಯ ನಡುವೆ, ಪುರ ದ್ವಾರಗಳಲ್ಲೆ, ಹೀಗೆಂದು ಪ್ರಚಾರ ಮಾಡುತ್ತಿದ್ದಾಳೆ:


ಅವರಿರುವರು ಪ್ರಭುವಿನಾಲಯದಲೆ ನೆಟ್ಟ ಸಸಿಗಳಂತೆ I ನಮ್ಮ ದೇವಾಂಗಳದಿ ಹುಲುಸಾಗಿ ಬೆಳೆವ ಮರಗಳಂತೆ I ಫಲಿಸುವರು ಮುಪ್ಪಿನಲೂ, ಶೋಭಿಸುವರು ಪಚ್ಚೆಪಸಿರಂತೆ II


ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನ ಮಾಡುವ ಮನೆಯ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು.


ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು