Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:36 - ಕನ್ನಡ ಸತ್ಯವೇದವು C.L. Bible (BSI)

36 ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದರೆ ನನ್ನನ್ನು ಕಂಡುಕೊಳ್ಳಲಾರದವನು ತನಗೇ ಕೇಡುಮಾಡಿಕೊಳ್ಳುವನು. ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:36
20 ತಿಳಿವುಗಳ ಹೋಲಿಕೆ  

ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು; ಅವನನ್ನು ಕೆಣಕುವವನು ಪ್ರಾಣಕ್ಕೆ ಅಪಾಯ ತಂದುಕೊಳ್ವನು.


ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು.


ನೀನು ಪಾಪಮಾಡದಿದ್ದರೆ ದೇವರಿಗೇನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಿದರೆ ಅವರಿಗಾದ ನಷ್ಟವೇನು?


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗಕ್ಷಾಮವ್ಯಾಧಿಗಳಿಂದ ಸಾಯಬೇಕಾಗುವುದೆಂದು ಸರ್ವೇಶ್ವರನೇ ನುಡಿದಿದ್ದಾರೆ. ಅಂಥ ಗತಿ ನಿಮಗೂ ನಿಮ್ಮ ಪ್ರಜೆಗೂ ಏಕೆ ಬರಬೇಕು?


ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು