Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:4 - ಕನ್ನಡ ಸತ್ಯವೇದವು C.L. Bible (BSI)

4 ಮನುಜರೇ, ನಾನು ಕರೆಯುತ್ತಿರುವುದು ನಿಮ್ಮನ್ನೆ ನಾನು ಕೂಗಿ ಕರೆಯುತ್ತಿರುವುದು ಮಾನವ ಕುಲಪುತ್ರರನ್ನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಜನರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ಧ್ವನಿಗೈಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮನುಷ್ಯರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ದನಿಗೈಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಮನುಷ್ಯರೇ, ನಿಮ್ಮನ್ನೇ ಕರೆಯುತ್ತೇನೆ; ಎಲ್ಲಾ ಜನರನ್ನು ಕರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಮನುಷ್ಯರೇ, ನಾನು ಕರೆಯುತ್ತಿರುವುದು ನಿಮ್ಮನ್ನೇ, ಮಾನವರಿಗಾಗಿಯೇ ನಾನು ಧ್ವನಿಗೈಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:4
13 ತಿಳಿವುಗಳ ಹೋಲಿಕೆ  

ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ನಗರದ ಹೆಬ್ಬಾಗಿಲುಗಳಲ್ಲೂ ಜನಸೇರುವ ಪ್ರವೇಶದ್ವಾರಗಳಲ್ಲೂ ಘೋಷಿಸುತ್ತಾಳೆ ಹೀಗೆಂದು:


ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು