Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:7 - ಕನ್ನಡ ಸತ್ಯವೇದವು C.L. Bible (BSI)

7 ನನ್ನ ಬಾಯಿಂದ ಬರುತ್ತಿರುವುದು ಸತ್ಯ ನನ್ನ ತುಟಿಗೆ ದುಷ್ಟತನ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಬಾಯಿ ಸತ್ಯವನ್ನೇ ಆಡುವುದು, ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಬಾಯಿ ಸತ್ಯವನ್ನೇ ಆಡುವದು, ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಮಾತುಗಳು ಸತ್ಯ. ನನ್ನ ತುಟಿಗಳಿಗೆ ದುಷ್ಟತನ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ಬಾಯಿಯು ಸತ್ಯವನ್ನು ಮಾತಾಡುವುದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:7
13 ತಿಳಿವುಗಳ ಹೋಲಿಕೆ  

ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II


ಅದಕ್ಕೆ ಯೇಸು, ‘ನಾನೇ ನನ್ನ ಪರವಾಗಿ ಸಾಕ್ಷಿ ನೀಡಿದರೂ ನನ್ನ ಸಾಕ್ಷಿಗೆ ಬೆಲೆಯುಂಟು. ಏಕೆಂದರೆ, ನಾನು ಎಲ್ಲಿಂದ ಬಂದೆ, ಎಲ್ಲಿಗೆ ಹೋಗುತ್ತಿರುವೆ, ಎಂದು ನನಗೆ ತಿಳಿದಿದೆ. ನಿಮಗಾದರೋ ನಾನು ‘ಬಂದುದು ಎಲ್ಲಿಂದ, ಹೋಗುವುದು ಎಲ್ಲಿಗೆ’ ಎಂದು ತಿಳಿಯದು.


ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.


ಮಿಥ್ಯವಾದಿಗಳು ಸರ್ವೇಶ್ವರನಿಗೆ ಹೇಸು; ಸತ್ಯವಾದಿಗಳು ಆತನಿಗೆ ಲೇಸು.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಸಜ್ಜನರಿಗೆ ದುರ್ಮಾರ್ಗಿ ತಿರಸ್ಕೃತನು; ದುರ್ಜನರಿಗೆ ಸನ್ಮಾರ್ಗಿ ತಿರಸ್ಕೃತನು.


ನನ್ನ ಮಾತು ಸುಳ್ಳಲ್ಲವೆಂಬುದು ನಿಶ್ಚಯ ನಿನ್ನ ಬಳಿಯಿರುವನು ಜ್ಞಾನಪೂರ್ಣನೋರ್ವ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು