Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:9 - ಕನ್ನಡ ಸತ್ಯವೇದವು C.L. Bible (BSI)

9 ತಿಳುವಳಿಕೆ ಉಳ್ಳವನಿಗೆ ಅವೆಲ್ಲ ಸರಳ ಗ್ರಹಿಕೆ ಉಳ್ಳವನಿಗೆ ಅವು ಯಥಾರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ ತಿಳುವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತಿಳುವಳಿಕೆಯುಳ್ಳವನಿಗೆ ನನ್ನ ಮಾತುಗಳು ಸ್ಪಷ್ಟವಾಗಿವೆ; ವಿವೇಕಿಗೆ ಯಥಾರ್ಥವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಿವೇಚಿಸುವವನಿಗೆ ನನ್ನ ಎಲ್ಲ ಮಾತುಗಳು ನೇರವಾಗಿರುವುದು. ತಿಳುವಳಿಕೆ ಉಳ್ಳವನಿಗೆ ಅವು ಪ್ರಾಮಾಣಿಕವಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:9
17 ತಿಳಿವುಗಳ ಹೋಲಿಕೆ  

ಕುಚೋದ್ಯನಿಗೆ ಜ್ಞಾನ ಹುಡುಕಿದರೂ ಸಿಕ್ಕದು; ವಿವೇಕಿಗೆ ತಿಳುವಳಿಕೆ ಸುಲಭವಾಗಿ ದಕ್ಕುವುದು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.


ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.


ಯಕೋಬ ವಂಶವು ಶಾಪಗ್ರಸ್ತವಾಗಲು ಸಾಧ್ಯವೆ? ಸರ್ವೇಶ್ವರ ತಾಳ್ಮೆಗೆಡುವುದುಂಟೆ? ಇಂಥ ಕೃತ್ಯಗಳನ್ನು ಅವರು ಮಾಡಿಯಾರೆ? ಸನ್ಮಾರ್ಗದಲ್ಲಿ ನಡೆಯುವವರಿಗೆ ಸ್ವಾಮಿಯ ವಾಕ್ಯ ಒಳಿತನ್ನುಂಟುಮಾಡುವುದಿಲ್ಲವೆ?” ಎನ್ನುವರು.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಬುದ್ಧಿವಂತನ ಮನಸ್ಸು ತಿಳುವಳಿಕೆಯನ್ನು ಗಳಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.


ವಿವೇಕಿಗೆ ಜ್ಞಾನವೇ ಗುರಿ ಧ್ಯೇಯ; ಮೂಢನ ದೃಷ್ಟಿ ದಿಗಂತದಷ್ಟು ವಿಶಾಲ.


ವಿವೇಕಿಯ ಮನ ತಿಳುವಳಿಕೆಯನ್ನು ಅರಸುವುದು; ಮತಿಹೀನನ ಬಾಯಿ ಮೂರ್ಖತನವನ್ನು ಮುಕ್ಕುವುದು.


ಜ್ಞಾನವನ್ನು ಕಂಡು ಹಿಡಿಯುವವನು ಧನ್ಯನು, ವಿವೇಕವನ್ನು ಗಳಿಸುವವನು ಭಾಗ್ಯವಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು