Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:6 - ಕನ್ನಡ ಸತ್ಯವೇದವು C.L. Bible (BSI)

6 ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:6
17 ತಿಳಿವುಗಳ ಹೋಲಿಕೆ  

ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ಜ್ಞಾನಮಾರ್ಗವನ್ನು ನಿನಗೆ ಉಪದೇಶಿಸುವೆನು. ಸತ್ಯಮಾರ್ಗದಲ್ಲಿ ನಿನ್ನನ್ನು ನಡೆಸುವೆನು.


ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ.


ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಳ್ಳುವನು ಸರ್ವೇಶ್ವರನ ಕೃಪಾಕಟಾಕ್ಷಕ್ಕೆ ಪಾತ್ರನಾಗುವನು.


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ಎಲೌ ಕುವರಿಯೇ, ಕೇಳು, ಎನ್ನ ಮಾತಿಗೆ ಕಿವಿಗೊಡು I ನಿನ್ನ ಜನರನು, ತೌರು ಮನೆಯನು ಮರೆತುಬಿಡು II


ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.


ಮಗನೇ ಕೇಳು, ಬುದ್ಧಿವಂತನಾಗಿರು, ನಿನ್ನ ಮನಸ್ಸನ್ನು ಸನ್ಮಾರ್ಗದತ್ತ ಹರಿಸು.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು