Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:7 - ಕನ್ನಡ ಸತ್ಯವೇದವು C.L. Bible (BSI)

7 ಕುಚೋದ್ಯಗಾರರನ್ನು ಶಿಕ್ಷಿಸುವವನು ತನ್ನನ್ನೆ ಅಪಮಾನಕ್ಕೆ ಗುರಿಮಾಡಿಕೊಳ್ಳುತ್ತಾನೆ. ದುಷ್ಟನನ್ನು ಗದರಿಸುವವನು ತನಗೇ ಕಳಂಕ ತಂದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೆ ಕಳಂಕವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:7
13 ತಿಳಿವುಗಳ ಹೋಲಿಕೆ  

ಕುಚೋದ್ಯನಿಗೆ ಬೇಡ ಬುದ್ಧಿವಾದ; ಅವನಿಗೆ ಬೇಡ ಜ್ಞಾನಿಗಳ ಸತ್ಸಂಘ.


ಮೂಢನ ಸಂಗಡ ಮಾತನಾಡಬೇಡ; ನಿನ್ನ ಬುದ್ಧಿಮಾತನ್ನು ಅವನು ಮಾನ್ಯಮಾಡ.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಅವನನ್ನು ಕಂಡಕೂಡಲೆ, “ಇಸ್ರಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿರುವೆಯಾ?’ ಎಂದನು.


ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು.


ಬುದ್ಧಿವಂತ ಮಗ ತಂದೆಯ ಶಿಕ್ಷಣವನ್ನು ಕೇಳುವನು; ಕಿತ್ತಾಡುವ ಮಗ ಗದರಿಕೆಯನ್ನೂ ಕೇಳಲೊಲ್ಲನು.


ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ರಾಜ ಹಿಜ್ಕೀಯನು ಆಜ್ಞಾಪಿಸಿದ್ದರಿಂದ ಆ ಮೂವರು ಏನನ್ನು ಹೇಳದೆ ಸುಮ್ಮನಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು