Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಕೊಟ್ಟ ಸಲಹೆಗಳನ್ನು ಜ್ಞಾಪಿಸಿಕೋ; ಸಭಾಹಿರಿಯನು ನಿಂದಾರಹಿತನೂ ಏಕಪತ್ನಿ ವ್ರತಸ್ಥನೂ ಆಗಿರಬೇಕು. ಆತನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ಸ್ವೇಚ್ಛಾಚಾರಿಗಳಾಗಿರಬಾರದು, ಅವಿಧೇಯರಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಭೆಯ ಹಿರಿಯನು ನಿಂದಾರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರು ದುರ್ಮಾರ್ಗಸ್ಥರೆನಿಸಿಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವರಾಗಲಿ ಆಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 “ಎಕ್ ವಡಿಲ್ ಚುಕೆತ್ ನಸಲ್ಲೊ ರ್‍ಹಾವ್ಚೊ; ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ,” ತೆಚಿ ಪೊರಾ ದೆವಾಕ್ ವಿಶ್ವಾಸಾನ್ ರ್‍ಹಾವ್ಚಿ, ಅನಿ ಗೊಸ್ಟ್ ಮಾನಿನಸಲ್ಲಿ ಪೊರಾ ಮನ್ವುನ್ ಘೆವ್ನ್ ಕಟೊರ್ ಸ್ವಬಾವಾಚೆ ಹೊವ್ನ್ ರ್‍ಹಾವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:6
18 ತಿಳಿವುಗಳ ಹೋಲಿಕೆ  

ಸಭಾಸೇವಕರು ಏಕಪತ್ನಿಯುಳ್ಳವರಾಗಿದ್ದು ತಮ್ಮ ಮಕ್ಕಳನ್ನೂ ಕುಟುಂಬವನ್ನೂ ಜವಾಬ್ದಾರಿಯುತವಾಗಿ ನಡೆಸಿಕೊಂಡು ಹೋಗುವವರಾಗಿರಬೇಕು.


ಇತ್ತೀಚೆಗೆ ಅವಿಧೇಯರು, ಜೊಳ್ಳು ಮಾತಿನವರು ಹಾಗೂ ವಂಚಕಬೋಧಕರು ತಲೆ ಎತ್ತಿದ್ದಾರೆ. ಅವರಲ್ಲಿ ಕ್ರೈಸ್ತರಾಗಿರುವ ಯೆಹೂದ್ಯರು ಸಾಕಷ್ಟು ಮಂದಿ ಇದ್ದಾರೆ.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.


ಯಾಜಕರು ತಮ್ಮ ದೇವರಿಗೆ ಮೀಸಲಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್‍. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು.


ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು.


ಈಗ ಏಲಿ ಬಹಳ ಮುದುಕನಾಗಿದ್ದ. ತನ್ನ ಮಕ್ಕಳು ಇಸ್ರಯೇಲ್ ಜನರಿಗೆ ಮಾಡುತ್ತಿದ್ದುದೆಲ್ಲಾ ಅವನ ಕಿವಿಗೆ ಬೀಳುತ್ತಿತ್ತು. ದೇವದರ್ಶನದ ಗುಡಾರದ ಬಾಗಿಲಿನಲ್ಲಿ ಕೆಲಸಮಾಡುತ್ತಿದ್ದ ಸ್ತ್ರೀಯರೊಡನೆ ಮಲಗುತ್ತಿದ್ದಾರೆಂಬುದನ್ನೂ ಕೇಳಿದ್ದ.


ಎಲ್ಕಾನನು ರಾಮಾದಲ್ಲಿದ್ದ ತನ್ನ ಮನೆಗೆ ಹಿಂದಿರುಗಿದನು. ಹುಡುಗ ಸಮುವೇಲನು ಯಾಜಕ ಏಲಿಯನ ಕೈಕೆಳಗಿದ್ದು ಸರ್ವೇಶ್ವರನ ಸೇವೆಮಾಡುತ್ತಾ ಬಂದನು.


ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ವೇಶ್ಯೆಯನ್ನಾಗಲಿ ಮದುವೆ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯೇ ಹೆಣ್ಣನ್ನು ಪರಿಗ್ರಹಿಸಬೇಕು;


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.


ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು