ತೀತನಿಗೆ 1:9 - ಕನ್ನಡ ಸತ್ಯವೇದವು C.L. Bible (BSI)9 ವಿಶ್ವಾಸಿಸಲು ಯೋಗ್ಯವಾದ ಹಾಗೂ ಕ್ರೈಸ್ತತತ್ವಗಳಿಗೆ ಅನುಗುಣವಾದ ಸಿದ್ಧಾಂತಗಳನ್ನು ಅವನು ಭದ್ರವಾಗಿ ಹಿಡಿದವನಾಗಿರಬೇಕು. ಆಗ ಸದ್ಬೋಧನೆಯಿಂದ ಇತರರನ್ನು ಪ್ರೋತ್ಸಾಹಿಸುವುದಕ್ಕೂ ಅದಕ್ಕೆ ವ್ಯತಿರಿಕ್ತವಾಗಿ ನಡೆಯುವವರ ತಪ್ಪುಗಳನ್ನು ಎತ್ತಿತೋರಿಸುವುದಕ್ಕೂ ಆತನು ಸಮರ್ಥನಾಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವದಕ್ಕೂ ಎದುರಿಸುವವರ ಬಾಯಿಕಟ್ಟುವದಕ್ಕೂ ಶಕ್ತನಾಗಿರುವಂತೆ ಕ್ರಿಸ್ತ ಬೋಧಾನುಸಾರವಾದ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇತರರನ್ನು ಸ್ವಸ್ಥಬೋಧನೆಯಿಂದ ಪ್ರೋತ್ಸಾಹಿಸುವುದಕ್ಕೂ ಎದುರಿಸುವವರನ್ನು ಖಂಡಿಸುವಂತೆ ಮಾತನಾಡುವುದಕ್ಕೂ ಶಕ್ತನಾಗಿರಲು ಅವನು ಬೋಧಿಸಿದ ಪ್ರಕಾರ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅನಿ ತೊ ತ್ಯಾ ಬರೊಸ್ಯಾಕ್ ಯೊಗ್ಯ್ ಅಸಲ್ಲ್ಯಾ ಬರ್‍ಯಾ ಖಬ್ರೆಕ್ ಘಟ್ಟ್ ಧರುನ್ ಘೆವ್ನ್ ರ್‍ಹಾವ್ಚೆ ಮನ್ತಲ್ಯಾ ವಿಶಯಾತ್ ಶಿಕ್ವುನ್ ಹೊಲಾ. ಹೆಜ್ಯಾಸಾಟಿ ತೊ ಲೊಕಾಕ್ನಿ ಖರೆಪಾನ್ ಸಿಕ್ವುನ್ಗೆತ್ ತೆಂಕಾ ಉಮ್ಮೆದ್ ಭರಿ ಸಾರ್ಕೆ ಕರುಚೆ, ಕೊನ್ ವಿರೊದ್ ಹೊವ್ನ್ ರ್‍ಹಾತಾ ನ್ಹಯ್, ತೆಂಕಾ ಜೊರ್ ಕರ್‍ತಲೊ ಹೊವ್ನ್ ರ್‍ಹಾವ್ಚೊ. ಅಧ್ಯಾಯವನ್ನು ನೋಡಿ |