Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:10 - ಕನ್ನಡ ಸತ್ಯವೇದವು C.L. Bible (BSI)

10 ಬದಲಿಗೆ, ತಾವು ಒಳ್ಳೆಯವರು ಮತ್ತು ಸ್ವಾಮಿನಿಷ್ಠೆಯುಳ್ಳವರು ಎಂದು ಹೆಸರು ಪಡೆಯಲಿ. ಜಗದ್ರಕ್ಷಕರಾದ ದೇವರ ಉಪದೇಶಕ್ಕೆ ಎಲ್ಲಾ ವಿಧದಲ್ಲೂ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎದುರುಮಾತನ್ನಾಡದೆ ಯಾವದನ್ನೂ ಕದ್ದಿಟ್ಟುಕೊಳ್ಳದೆ ಪೂರಾ ನಂಬಿಗಸ್ತರೆಂದು ಹೆಸರುಹೊಂದಿ ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಅಲಂಕಾರವಾಗಿರಬೇಕೆಂದು ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ವಸ್ತುಗಳನ್ನು ಕದಿಯಬಾರದು; ಮತ್ತು ತಾವು ನಂಬಿಗಸ್ತರೆಂಬುದನ್ನು ತೋರಿಸಿಕೊಡಬೇಕು. ಗುಲಾಮರು ಹೀಗೆ ನಡೆದುಕೊಳ್ಳುವುದಾದರೆ, ಅವರು ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ನಮ್ಮ ರಕ್ಷಕನಾದ ದೇವರ ಉಪದೇಶವು ಶ್ರೇಷ್ಠವಾದದ್ದೆಂದು ತೋರ್ಪಡಿಸಲು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯಾವುದನ್ನೂ ಕದ್ದಿಟ್ಟುಕೊಳ್ಳದೆ, ನಮ್ಮ ರಕ್ಷಕರಾದ ದೇವರ ಉಪದೇಶವನ್ನು ಎಲ್ಲಾ ವಿಷಯಗಳಲ್ಲಿಯೂ ಅಲಂಕರಿಸುವಂತೆ, ಒಳ್ಳೆಯ ನಂಬಿಗಸ್ತರೆಂದು ಎಲ್ಲದರಲ್ಲಿಯೂ ತೋರಿಸಬೇಕೆಂದು ಅವರನ್ನು ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಂಚೆ ಕಾಯ್ಬಿ ಚೊರುಚೆ ನ್ಹಯ್. ಹೆಚ್ಯಾ ಬದ್ಲಾಕ್, ತೆನಿ ಕನ್ನಾಬಿ ವಿಶ್ವಾಸಿ ಅನಿ ಬರಿ ಲೊಕಾ ಮನುನ್ ದಾಕ್ವುನ್ ದಿವ್ಚೆ, ಅಶೆ ಅಮ್ಚ್ಯಾ ದೆವಾ ಸುಟ್ಕಾ ದಿನಾರ್‍ಯಾಚ್ಯಾ ವಿಶಯಾತ್ ಶಿಕ್ವಲ್ಲ್ಯಾ ಶಿಕಾಪಾಚೊ ಮಾನ್ ಜಾಸ್ತಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:10
29 ತಿಳಿವುಗಳ ಹೋಲಿಕೆ  

ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಅಹಂಭಾವಿ ಹಾಗೂ ಅಜ್ಞಾನಿಯೇ ಸರಿ.


ದಾಸ್ಯದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ವಿಧದಲ್ಲೂ ಗೌರವಿಸಬೇಕು. ಇಲ್ಲದಿದ್ದರೆ, ದೇವರ ಹೆಸರಿಗೂ ನಮ್ಮ ಬೋಧನೆಗೂ ಕಳಂಕವುಂಟಾಗುತ್ತದೆ.


ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ.


ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ.


“ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.


ಆರಿಸಿಕೊಳ್ವೆನು ನಾಡಿನ ಸಜ್ಜನರನು I ಇರಿಸಿಕೊಳ್ವೆನು ನನ್ನೊಡನೆ ವಾಸಿಸಲವರನು I ಸನ್ಮಾರ್ಗಿಯೆ ನನ್ನ ಸೇವಕನಾಗಿರುವನು II


ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.


ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.


ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ?


ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.


“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II


ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.


ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು