ತೀತನಿಗೆ 2:14 - ಕನ್ನಡ ಸತ್ಯವೇದವು C.L. Bible (BSI)14 ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅಮ್ಕಾ ಸಗ್ಳ್ಯಾ ರಿತಿಚ್ಯಾ ಬುರ್ಶ್ಯಾ ಪಾನಾತ್ನಾ ಸುಟ್ಕಾ ಕರುಕ್ ಅನಿ ಅಮ್ಕಾ ಪವಿತ್ರ್ ಲೊಕಾ ಕರುಕ್ ಅನಿ ತೆಕಾ ಎಕ್ಲ್ಯಾಕುಚ್ ಸಮಂದ್ ಪಡಲ್ಲೆ ಅನಿ ಬರೆ ಕಾಮ್ ಕರುಕ್ ಉಮ್ಮೆದಿನ್ ಭರಲ್ಲಿ ಲೊಕಾ ಕರುಕ್, ತೆನಿ ಅಮ್ಚ್ಯಾಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |