Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:15 - ಕನ್ನಡ ಸತ್ಯವೇದವು C.L. Bible (BSI)

15 ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ತಿಯಾ ಹಿ ಸಗ್ಳಿ ಗೊಸ್ಟಿಯಾ ಸಿಕ್ವು, ಉಮ್ಮೆದ್ ಅನಿ ಬೆಸಡ್ಕಿ ಸಗ್ಳ್ಯಾ ಅದಿಕಾರಾನ್ ಕರ್, ಕಶ್ಯಾಕ್ ಮಟ್ಲ್ಯಾರ್ ತುಕಾ ಕೊನ್ಬಿ ಕಿಳ್ ಕರುನ್ ಬಗುಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:15
10 ತಿಳಿವುಗಳ ಹೋಲಿಕೆ  

ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.


ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.


ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು.


ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು.


“ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.


ಯಾರೂ ಆತನನ್ನು ತಾತ್ಸಾರ ಮಾಡದಿರಲಿ. ಸಮಾಧಾನದಿಂದ ಆತನು ನನ್ನ ಬಳಿಗೆ ಬರುವಂತೆ ಕಳುಹಿಸಿಕೊಡಿ. ಆತನ ಆಗಮನವನ್ನು ನಾನು ಇತರ ಸಹೋದರರೊಡನೆ ಎದುರುನೋಡುತ್ತಿದ್ದೇನೆ.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು