Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:2 - ಕನ್ನಡ ಸತ್ಯವೇದವು C.L. Bible (BSI)

2 ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೇಗಂದರೆ ವೃದ್ಧರು ಮದ್ಯಾಸಕ್ತಿಯಿಲ್ಲದವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥರೂ ಆಗಿರಬೇಕೆಂದು ಬೋಧಿಸು. ಹಾಗೆಯೇ ವೃದ್ಧಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಗುಲಾಮರೂ ಆಗಿರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ವೃದ್ಧರಾದವರು, ಜಿತೇಂದ್ರಿಯರೂ ಗಂಭೀರ ಸ್ವಭಾವದವರೂ ವಿವೇಕವುಳ್ಳವರೂ ಆಗಿರಬೇಕೆಂದು ತಿಳಿಸು. ಅವರು ತಮ್ಮ ನಂಬಿಕೆಯಲ್ಲಿ, ಪ್ರೀತಿಯಲ್ಲಿ ಮತ್ತು ತಾಳ್ಮೆಯಲ್ಲಿ ಬಲವಾಗಿರಬೇಕೆಂದು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವೃದ್ಧರು ಆತ್ಮ ಸಂಯಮವುಳ್ಳವರೂ ಗೌರವಕ್ಕೆ ಯೋಗ್ಯರೂ ಸ್ವಯಂನಿಯಂತ್ರಿತರೂ ನಂಬಿಕೆ, ಪ್ರೀತಿ, ತಾಳ್ಮೆ ಇವುಗಳಲ್ಲಿ ಬದಲಾಗದವರೂ ಆಗಿರಬೇಕೆಂದು ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮ್ಹಾತಾರ್‍ಯಾ ಘೊಮನ್ಸಾನಿ, ಸಂಬಾಳ್ನಾರೆ, ಗಂಬಿರ್, ಅನಿ ಶಾನೆ ಹೊವ್ನ್ ರ್‍ಹಾವ್ಚೆ ಅನಿ ವಿಶ್ವಾಸಾತ್ ಪ್ರೆಮಾತ್ ಅನಿ ಸಗ್ಳೆ ಸಂಬಾಳುನ್ ಘೆವ್ನ್ ಜಾತಲ್ಯಾತ್ ಅನಿ ವಿಶ್ವಾಸಾತ್ ಘಟ್ ಹೊವ್ನ್ ರ್‍ಹಾವ್ಚೆ ಮನುನ್ ಬುದ್ದ್ ಸಾಂಗ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:2
33 ತಿಳಿವುಗಳ ಹೋಲಿಕೆ  

ಇವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವುದಿಲ್ಲ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.


ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.


ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ಜ್ಞಾನವಿದೆ ವಯೋವೃದ್ಧರಲ್ಲಿ ವಿವೇಕವಿದೆ ದೀರ್ಘಾಯುಷ್ಯರಲ್ಲಿ.


“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.


ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಆಗಿರಬೇಕು. ಇಂಥವನು ಸ್ವಸ್ಥಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು.


ತನ್ನ ಕುಟುಂಬವನ್ನು ಜವಾಬ್ದಾರಿಯುತವಾಗಿ ನಡೆಸುವವನೂ ಮಕ್ಕಳನ್ನು ಶಿಸ್ತಿನಲ್ಲಿ ಬೆಳೆಸಿ ಅವರಿಂದ ಗೌರವವನ್ನು ಪಡೆದುಕೊಳ್ಳುವವನೂ ಆಗಿರಬೇಕು.


ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ಅಂದ ಮೇಲೆ, ಇತರರಂತೆ ನಾವು ನಿದ್ದೆಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿ ವರ್ತಿಸೋಣ.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ನಮಗೆ ಬುದ್ಧಿಭ್ರಮಣೆಯಾಗಿದೆಯೆಂದು ಭಾವಿಸುತ್ತೀರೋ? ಹಾಗಿದ್ದರೆ ಅದು ದೇವರ ಮಹಿಮೆಗಾಗಿ ನಾವು ಸ್ವಸ್ಥಬುದ್ಧಿಯುಳ್ಳವರೆಂದು ನೆನೆಸುತ್ತೀರೋ? ಹಾಗಿದ್ದರೆ ಅದು ನಿಮ್ಮ ಹಿತಕ್ಕಾಗಿ.


ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು.


ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು.


ಕೆಲವೇ ದಿನ ಬದುಕುವ ಮಗುವಾಗಲಿ, ಆಯುಸ್ಸು ಮುಗಿಸದ ಮುದುಕನಾಗಲಿ ಇನ್ನು ಇಲ್ಲಿರನು. ನೂರು ವರ್ಷ ಬಾಳುವವನು ‘ಯುವಕ’ ಎನಿಸಿಕೊಳ್ಳುವನು; ನೂರರೊಳಗೆ ಸಾಯುವ ಪಾಪಿಯು ‘ಶಾಪಗ್ರಸ್ತ’ ಎನಿಸಿಕೊಳ್ಳುವನು.


ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು.


ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.


ಹಿರಿಯರನ್ನು ಗದರಿಸಬೇಡ; ಅವರನ್ನು ತಂದೆಯಂತೆ ಭಾವಿಸಿ ಗೌರವದಿಂದ ತಿಳುವಳಿಕೆ ನೀಡು. ಯುವಕರೊಡನೆ ಸೋದರಭಾವನೆಯಿಂದ ವರ್ತಿಸು.


ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು