Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:3 - ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು, ಅವರು ಚಾಡಿಹೇಳಬಾರದು; ಮದ್ಯಾಸಕ್ತರಾಗಿರಬಾರದು;ಸದ್ಬೋಧಕಿಯರಾಗಿರಬೇಕೆಂದು ವಿಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಂತೆಯೇ ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು. ಅವರು ಒಳ್ಳೆಯದನ್ನೇ ಉಪದೇಶಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದೇ ಪ್ರಕಾರ, ವೃದ್ಧಸ್ತ್ರೀಯರು ನಡತೆಯಲ್ಲಿ ಭಕ್ತಿಗೆ ತಕ್ಕ ಹಾಗೆ ಇರುವವರಾಗಿರಬೇಕು. ಅವರು ಸುಳ್ಳಾಗಿ ದೂರುವವರೂ ಮದ್ಯಾಸಕ್ತರೂ ಆಗಿರದೆ, ಒಳ್ಳೆಯವುಗಳನ್ನು ಬೋಧಿಸುವವರಾಗಿರಬೇಕು ಎಂದು ಅವರಿಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಚ್ ಮ್ಹಾತಾರ್‍ಯಾ ಬಾಯ್ಕಾಮನ್ಸಾಬಿ ದೆವಸ್ಪಾನಾನ್ ಚಲುಚೆ, ಚಾಡಿಯಾ ಸಾಂಗ್ತಲ್ಯಾ ನಾ ಹೊಲ್ಯಾರ್ ವಾಯ್ನ್ ಫಿತಲಿ ತಲಪ್ ಕರ್‍ತಲ್ಯಾ ಹೊವ್ನ್ ರ್‍ಹಾವ್ಚೆ ನ್ಹಯ್, ಬರಿ - ಬರಿ ಗೊಸ್ಟಿಯಾ ಶಿಕ್ವುತಲೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:3
13 ತಿಳಿವುಗಳ ಹೋಲಿಕೆ  

ಅವರು ನವಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು.


ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.


ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು.


ದೇವಜನರ ಯೋಗ್ಯತೆಗೆ ತಕ್ಕಂತೆ ಈಕೆಯನ್ನು ಪ್ರಭುವಿನ ಹೆಸರಿನಲ್ಲಿ ಬರಮಾಡಿಕೊಳ್ಳಿ. ನನಗೂ ಅನೇಕರಿಗೂ ನೆರವು ನೀಡಿರುವ ಈಕೆಗೆ ನಿಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡಿ.


ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ.


ಆಗಾಗ್ಗೆ ನೀನು ಅಸ್ವಸ್ಥನಾಗುವುದುಂಟು. ಆದ್ದರಿಂದ ಬರೀ ನೀರನ್ನು ಕುಡಿದರೆ ಸಾಲದು. ನಿನ್ನ ಜೀರ್ಣಶಕ್ತಿಯ ಸುಧಾರಣೆಗಾಗಿ ಸ್ವಲ್ಪ ದ್ರಾಕ್ಷಾರಸವನ್ನೂ ಸೇವಿಸು.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು