Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:5 - ಕನ್ನಡ ಸತ್ಯವೇದವು C.L. Bible (BSI)

5 ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮನೆಯಲ್ಲೇ ಕೆಲಸಮಾಡುವವರೂ ಸುಶೀಲೆಯರೂ ನಿಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ಬುದ್ಧಿ ಕಲಿಸುವ ಹಾಗೆ ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜ್ಞಾನವುಳ್ಳವರಾಗಿರಿ, ಪರಿಶುದ್ಧರಾಗಿರಿ, ನಿಮ್ಮ ಮನೆಕೆಲಸವನ್ನು ನೋಡಿಕೊಳ್ಳಿರಿ, ದಯೆಯುಳ್ಳವರಾಗಿರಿ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ” ಎಂದು ಉಪದೇಶಿಸಬೇಕು. ಆಗ ದೇವರು ನಮಗೆ ದಯಪಾಲಿಸಿದ ಬೋಧನೆಯನ್ನು ಟೀಕಿಸಲು ಯಾರಿಗೂ ಸಾಧ್ಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಅಪ್ನಾ ವರ್‍ತಿ ಅಪ್ನಾಕುಚ್ ಸಂಬಾಳುನ್ ಘೆವ್ನ್ ಕಶೆ ಅಪ್ನಿ ಹಾಳ್ ಹೊಯ್‍ನಸ್ತಾನಾ ರ್‍ಹಾವ್ಚೆ, ಅನಿ ಅಪ್ನಾಕುಚ್ ಅಪ್ನಾಚ್ಯಾ ಘೊವಾಕ್ ಒಪ್ಸುನ್ ದಿವ್ನ್ ಬರ್‍ಯಾ ಘರ್‍ಕಾರ್‍ನಿಯಾ ಹೊವ್ನ್ ರ್‍ಹಾವ್ಕ್ ಶಿಕ್ವುಚೆ, ಅಶೆ ದೆವಾಕ್ನಾ ಯೆಲ್ಲ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಕೊನ್ಬಿ ವಾಯ್ಟ್ ಬೊಲುಕ್ ಹೊವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:5
22 ತಿಳಿವುಗಳ ಹೋಲಿಕೆ  

ಮಹಿಳೆಯರೇ, ನಿಮ್ಮ ನಿಮ್ಮ ಪತಿಯರಿಗೆ ಪ್ರಭು ಮೆಚ್ಚುವಂತೆ ತಗ್ಗಿ ನಡೆದುಕೊಳ್ಳಿರಿ.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."


ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ದಾಸ್ಯದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ವಿಧದಲ್ಲೂ ಗೌರವಿಸಬೇಕು. ಇಲ್ಲದಿದ್ದರೆ, ದೇವರ ಹೆಸರಿಗೂ ನಮ್ಮ ಬೋಧನೆಗೂ ಕಳಂಕವುಂಟಾಗುತ್ತದೆ.


ಹಟಮಾರಿ, ಕೂಗಾಟದವಳು, ಮನೆಯಲ್ಲಿ ನಿಲ್ಲಲಾರದವಳು.


ಎಲ್ಲ ಕ್ರೈಸ್ತಸಭೆಗಳಲ್ಲಿ ರೂಢಿಯಲ್ಲಿರುವಂತೆ ಮಹಿಳೆಯರು ಮೌನವಾಗಿರಲಿ; ಮಾತನಾಡಲು ಅವರಿಗೆ ಅನುಮತಿಯಿಲ್ಲ. ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು ಅಧೀನರಾಗಿರಬೇಕು.


ಒಂದು ವಿಷಯ ನಿಮಗೆ ತಿಳಿದಿರಲಿ. ಪ್ರತಿಯೊಬ್ಬ ವ್ಯಕ್ತಿಗೂ ಕ್ರಿಸ್ತಯೇಸುವೇ ಶಿರಸ್ಸು. ಪ್ರತಿಯೊಬ್ಬ ಸ್ತ್ರೀಗೂ ಪುರುಷನೇ ಶಿರಸ್ಸು. ಕ್ರಿಸ್ತೇಸುವಿಗೆ ದೇವರೇ ಶಿರಸ್ಸು.


ಈ ಕಾರಣದಿಂದ. “ನಿಮ್ಮ ದೆಸೆಯಿಂದಲೇ ಯೆಹೂದ್ಯರಲ್ಲದವರು ದೇವರ ಹೆಸರನ್ನು ದೂಷಿಸುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.


ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II


ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”


ಬಳಿಕ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಆ ಅತಿಥಿಗಳು ವಿಚಾರಿಸಿದಾಗ, “ಅಲ್ಲಿ ಗುಡಾರದಲ್ಲಿದ್ದಾಳೆ,” ಎಂದು ಉತ್ತರಕೊಟ್ಟನು.


ನಿನಗೆ ರುಚಿಕರವಾದದ್ದು ಪರರಿಗೆ ದೂಷಣಾಸ್ಪದವಾಗದಿರಲಿ.


ಅವರು ನವಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು