Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:7 - ಕನ್ನಡ ಸತ್ಯವೇದವು C.L. Bible (BSI)

7-8 ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸತ್ಕಾರ್ಯಮಾಡುವದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಯಥಾರ್ಥತ್ವವೂ ಗೌರವವೂ ಆಕ್ಷೇಪಣೆಗೆ ಆಸ್ಪದವಿಲ್ಲದಂಥ ಸ್ವಸ್ಥಬುದ್ಧಿಯೂ ಇರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಯುವಕರಿಗೆ ಸರ್ವವಿಧದಲ್ಲಿಯೂ ಮಾದರಿಯಾಗಿರಬೇಕು. ನಿನ್ನ ಉಪದೇಶದಲ್ಲಿ ಯಥಾರ್ಥತೆಯನ್ನು ಮತ್ತು ಗಂಭೀರತೆಯನ್ನು ತೋರಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸಗ್ಳ್ಯಾ ಕಾಮಾತ್ನಿ ತಿಯಾ ತುಜ್ಯಾ ಯೆವ್ಡ್ಯಾಕ್ ದುಸ್ರ್ಯಾಕ್ನಿ ಎಕ್ ಬರ್‍ಯಾ ಚಾಲಿಚೊ ಉದಾರನ್ ಹೊವ್ನ್ ರ್‍ಹಾವ್ಚೆ. ತುಜ್ಯಾ ಶಿಕ್ವುತಲ್ಯಾ ಕಾಮಾತ್ ನಿಯತ್ತಿಚೊ ಅನಿ ಗಂಬಿರ್ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:7
12 ತಿಳಿವುಗಳ ಹೋಲಿಕೆ  

ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು