Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:14 - ಕನ್ನಡ ಸತ್ಯವೇದವು C.L. Bible (BSI)

14 ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮ ಜನರು ಸತ್ಕ್ರಿಯಾಹೀನರಾಗದಂತೆ ಅವರೂ ಸಹೋದರರಿಗೆ ಬೇಕಾದದ್ದನ್ನು ಕೊಡುವವರಾಗಿ ಪರೋಪಕಾರವನ್ನು ಕಲಿತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚಿ ಲೊಕಾ ಅಪ್ಲೊ ಸಗ್ಳೊ ಜಿವನ್ ಬಿ ದುಸ್ರ್ಯಾಂಚ್ಯಾ ಸಾಟ್ನಿ ಕಾಡುನ್ ಥವ್ತಲ್ಯಾತುಚ್ ಕಳ್ದುಕ್ ಶಿಕುಂದಿತ್. ಹೆಚ್ಯಾ ವೈನಾ ಕೊನಾಕ್ ಖರೆಚ್ ಗರಜ್ ಹಾಯ್ ತೆ ಪುರಾ ಹೊಂವ್ದಿತ್. ಅನಿ ತೆನಿ ಅಪ್ಲ್ಯಾ ಫಾಯ್ದ್ಯಾಕ್ ನಸಲ್ಲ್ಯಾಂಚ್ಯಾ ಸರ್ಕೆ ಕರಿಸ್ತಾನಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:14
21 ತಿಳಿವುಗಳ ಹೋಲಿಕೆ  

ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು.


ಈ ಗುಣಗಳು ನಿಮ್ಮಲ್ಲಿ ಬೆಳೆದು ಸಮೃದ್ಧವಾಗಿದ್ದರೆ, ನಮ್ಮ ಪ್ರಭು ಯೇಸುಕ್ರಿಸ್ತರನ್ನು ಅರಿತು ಬಾಳುವುದರಲ್ಲಿ ಇವು ನಿಮ್ಮನ್ನು ಚೈತನ್ಯಪೂರ್ಣರನ್ನಾಗಿಯೂ ಫಲಪ್ರದರನ್ನಾಗಿಯೂ ಮಾಡುತ್ತವೆ.


ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.


ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.


ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


ಅವರು ತನ್ನಂತೆಯೇ ಗುಡಾರಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸಮಾಡುತ್ತಾ ಬಂದನು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.


ದೇವಜನರಿಗೆ ಸಂಗ್ರಹಿಸಲಾದ ಧನಸಹಾಯವನ್ನು ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನನ್ನ ಈ ಕಾರ್ಯವನ್ನು ಮುಗಿಸಿಕೊಂಡು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ನಿಮ್ಮ ಬಳಿಗೆ ಬರುತ್ತೇನೆ.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ನಾನು ಥೆಸಲೋನಿಕದಲ್ಲಿದ್ದಾಗಲೂ ನನ್ನ ಕೊರತೆಯನ್ನು ನೀಗಿಸಲು ಒಂದೆರಡು ಬಾರಿ ಧನಸಹಾಯವನ್ನು ಕಳುಹಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು