Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:15 - ಕನ್ನಡ ಸತ್ಯವೇದವು C.L. Bible (BSI)

15 ನನ್ನ ಜೊತೆ ಇರುವವರೆಲ್ಲ ನಿನಗೆ ಶುಭಾಶಯಗಳನ್ನು ಕಳಿಸಿದ್ದಾರೆ. ಅಲ್ಲಿ ನಿನ್ನೊಂದಿಗಿರುವ ಕ್ರೈಸ್ತಬಾಂಧವರಿಗೂ ನನ್ನ ವಂದನೆಗಳನ್ನು ಸಲ್ಲಿಸು. ದೇವರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನನ್ನು ನಂಬುವವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಲ್ಲಿ ನನ್ನೊಡನೆ ಇರುವ ಜನರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆ ಇಟ್ಟವರಾಗಿದ್ದು ನಮ್ಮನ್ನು ಪ್ರೀತಿಸುವವರಿಗೆಲ್ಲ ನಮ್ಮ ವಂದನೆ ತಿಳಿಸು. ದೇವರ ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ವಿಶ್ವಾಸದಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಾಜ್ಯಾ ವಾಂಗ್ಡಾ ಹೊತ್ತ್ಯಾ ಸಗ್ಳ್ಯಾನಿ ತುಮ್ಕಾ ನಮಸ್ತೆ ಮಟ್ಲ್ಯಾನಾತ್. ವಿಶ್ವಾಸಾತ್ ಅಸಲ್ಲ್ಯಾ, ಅಮ್ಚೊ ಪ್ರೆಮ್ ಕರ್‍ತಲ್ಯಾ ಸಗ್ಳ್ಯಾಕ್ನಿ ಅಮ್ಚೊ ನಮಸ್ಕಾರ್ ಸಾಂಗ್. ದೆವಾಚಿ ಕುರ್ಪಾ ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:15
14 ತಿಳಿವುಗಳ ಹೋಲಿಕೆ  

ದೇವರ ಕೃಪಾಶೀರ್ವಾದ ನಿಮ್ಮೆಲ್ಲರಲ್ಲೂ ಇರಲಿ!


ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ಇದನ್ನು ಪೌಲನಾದ ನಾನೇ ಸ್ವತಃ ಬರೆಯುತ್ತಿದ್ದೇನೆ. ನಾನು ಸೆರೆಯಲ್ಲಿದ್ದೇನೆ ಎಂಬುದು ನಿಮಗೆ ನೆನಪಿರಲಿ. ಶುಭಾಶಯಗಳು! ದೈವಾನುಗ್ರಹ ನಿಮ್ಮಲ್ಲಿರಲಿ!


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:


ಏಕೆಂದರೆ, ಪ್ರಭು ಯೇಸುವಿನಲ್ಲೂ ದೇವಜನರೆಲ್ಲರಲ್ಲೂ ನಿನಗಿರುವ ಪ್ರೀತಿವಿಶ್ವಾಸದ ಬಗ್ಗೆ ನಾನು ಕೇಳುತ್ತಿದ್ದೇನೆ.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರಲ್ಲಿರಲಿ.


ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?


ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಈ ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು