ತೀತನಿಗೆ 3:7 - ಕನ್ನಡ ಸತ್ಯವೇದವು C.L. Bible (BSI)7 ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅಶೆ, ಅಮಿ ತೆಚ್ಯಾ ಕುರ್ಪೆ ವೈನಾ ರಾಕುನ್ ಹೊತ್ತೆ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಲಿ ಮರ್‍ಯಾದ್ ಅಮ್ಕಾ ಗಾವಿ ಸರ್ಕೆ ದೆವಾಚ್ಯಾ ಇದ್ರಾಕ್ ನಿತಿವಂತ್ ಕರುನ್ ಥವ್ಲ್ಯಾನ್. ಅಧ್ಯಾಯವನ್ನು ನೋಡಿ |
ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.