Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:1 - ಕನ್ನಡ ಸತ್ಯವೇದವು C.L. Bible (BSI)

1 ಜುದೇಯದ ಅರಸ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದು ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರುಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇವಿುಗೆ ಬಂದು ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೆಬೂಕದ್ನೆಚ್ಚರನು ಬಾಬಿಲೋನಿನ ಅರಸನಾಗಿದ್ದನು. ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದನು. ನೆಬೂಕದ್ನೆಚ್ಚರನು ತನ್ನ ಸೈನ್ಯ ಸಮೇತ ಜೆರುಸಲೇಮಿಗೆ ಮುತ್ತಿಗೆ ಹಾಕಿದನು. ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಈ ಘಟನೆ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:1
14 ತಿಳಿವುಗಳ ಹೋಲಿಕೆ  

ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ನೀನು ಪಡೆದ ಮಕ್ಕಳಲ್ಲಿ ಕೆಲವರನ್ನು, ನಿನ್ನ ಸ್ವಂತ ಪುತ್ರರನ್ನು ತೆಗೆದುಕೊಂಡು ಹೋಗಿ ಬಾಬಿಲೋನಿಯರ ಅರಸರ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,” ಎಂದು ಹೇಳಿದನು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೇ ವರ್ಷದಲ್ಲಿ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.


ಯೋಷೀಯನ ಮಗನಾದ ಜುದೇಯದ ಅರಸ ಯೆಹೋಯಾಕೀಮನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು:


ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಕೇಳಿ ಬಂದ ಸರ್ವೇಶ್ವರನ ವಾಣಿ:


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದನು. ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಜ್ಞೆಯ ಪ್ರಕಾರ ಈ ವಾಕ್ಯವನ್ನು ಬಾರೂಕನಿಗೆ ನುಡಿದನು.


ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಸರ್ವೇಶ್ವರ ಸ್ವಾಮಿ ನುಡಿಸಿದ ವಾಕ್ಯ ಇದು:


ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು.


ನೆಬೂಕದ್ನೆಚ್ಚರನು ಸೆರೆಗೆ ಒಯ್ದವರ ಲೆಕ್ಕದ ಪಟ್ಟಿ ಹೀಗಿದೆ; ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು,


ಅಂತೆಯೇ, ದಾನಿಯೇಲನನ್ನು ರಾಜ ಸನ್ನಿಧಿಗೆ ಬರಮಾಡಲಾಯಿತು. ರಾಜನು ಅವನಿಗೆ: “ರಾಜನಾದ ನನ್ನ ತಂದೆ ಜುದೇಯದಿಂದ ಖೈದಿಯಾಗಿ ತಂದು ಸೆರೆಮಾಡಿದ ಯೆಹೂದ್ಯರಲ್ಲಿ ದಾನಿಯೇಲ್ ಎಂಬುವನು ನೀನೋ?


ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ರೂಮದವಳೂ ಪೆದಾಯನ ಮಗಳೂ ಆದ ಜೆಬೂದಾ ಎಂಬಾಕೆ ಅವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು