Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:18 - ಕನ್ನಡ ಸತ್ಯವೇದವು C.L. Bible (BSI)

18 ರಾಜನು ನೇಮಿಸಿದ ಕಾಲವು ಕಳೆಯಿತು. ಆ ಯುವಕರನ್ನು ರಾಜಸನ್ನಿಧಿಗೆ ಕರೆದುತರುವ ಸಮಯವು ಬಂದಿತು. ಕಂಚುಕಿಯರ ನಾಯಕ ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದುತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಜನು ನೇವಿುಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಲ್ಲ ತರುಣರು ಮೂರು ವರ್ಷ ತರಬೇತಿ ಪಡೆಯಬೇಕೆಂದು ಅರಸನು ಹೇಳಿದ್ದನು. ಆ ಅವಧಿ ಮುಗಿದ ಮೇಲೆ ಅಶ್ಪೆನಜನು ಆ ಎಲ್ಲ ತರುಣರನ್ನು ಅರಸನಾದ ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅರಸನು ಅವರನ್ನು ಕರೆತರಬೇಕೆಂದು ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:18
4 ತಿಳಿವುಗಳ ಹೋಲಿಕೆ  

ಇದಲ್ಲದೆ, “ಇನ್ನು ಮುಂದಕ್ಕೆ ಅವರು ಸನ್ನಿಧಿಸೇವಕರಾಗುವಂತೆ, ನನ್ನ ಭೋಜನಪದಾರ್ಥಗಳನ್ನು ಹಾಗೂ ನಾನು ಕುಡಿಯುವ ದ್ರಾಕ್ಷಾರಸವನ್ನು ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು,” ಎಂದು ಆಜ್ಞಾಪಿಸಿದನು.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ರಾಜನು ಅವರ ಸಂಗಡ ಮಾತಾಡುವಾಗ ಅಲ್ಲಿದ್ದ ಯುವಕರಲ್ಲೆಲ್ಲ ದಾನಿಯೇಲನಿಗೆ, ಹನನ್ಯನಿಗೆ, ಮೀಶಾಯೇಲನಿಗೆ, ಅಜರ್ಯನಿಗೆ, ಸಮಾನರು ಯಾರೂ ಕಂಡುಬರಲಿಲ್ಲ. ಆದಕಾರಣ ಆ ನಾಲ್ವರು ಸನ್ನಿಧಿಸೇವಕರಾದರು.


ಆಮೇಲೆ ದಾನಿಯೇಲನು ಅರಮನೆಗೆ ಹೋಗಿ, “ನನಗೆ ಸಮಯಕೊಟ್ಟರೆ ಆ ಕನಸಿನ ಅರ್ಥವನ್ನು ರಾಜರಿಗೆ ನಾನು ವಿವರಿಸಬಲ್ಲೆ,” ಎಂದು ಅರಿಕೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು