Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:2 - ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:2
30 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಲಯದ ಹಲವು ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.


ಅದಕ್ಕೆ ಸೂತ್ರಧಾರಿಯಾದ ದೂತನು, “ಬಾಬಿಲೋನಿಯಾ ದೇಶಕ್ಕೆ: ಅಲ್ಲಿ ಅವಳಿಗೆ ಗುಡಿಕಟ್ಟುವುದಕ್ಕಾಗಿ ಹೋಗುತ್ತಿದ್ದಾರೆ. ಅದು ಸಿದ್ಧವಾದಾಗ ಅಲ್ಲಿನ ಪೀಠದ ಮೇಲೆ ಆ ಕೊಳಗವನ್ನು ಪ್ರತಿಷ್ಠಾಪಿಸಲಾಗುವುದು,” ಎಂದನು.


ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.


ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ಅವರು ಪೂರ್ವದಿಕ್ಕಿಗೆ ಪ್ರಯಾಣಮಾಡುತ್ತಾ ಇದ್ದಾಗ ಬಾಬಿಲೋನಿಯ ಕಾಡಿನ ಬಯಲು ಸೀಮೆ ಸಿಕ್ಕಿತು. ಅವರು ಅಲ್ಲೇ ನೆಲೆಸಲು ತೊಡಗಿದರು.


ಬಾಬಿಲೋನಿಯ (ಶಿನಾರ್) ನಾಡಿನಲ್ಲಿರುವ ಯೆರೆಕ್, ಅಕ್ಕದ್ ಬಾಬಿಲೋನ್ ಕಲ್ನೇ ಈ ಎಲ್ಲ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ತಮ್ಮ ಬಲೆಗೆ ಬಲಿಕೊಡುತ್ತಾರೆ; ಧೂಪ ಹಾಕುತ್ತಾರೆ. ಅವುಗಳ ಮೂಲಕವೇ ಅವರ ಜೀವನ ಗಟ್ಟಿ; ಅವರ ಭೋಜನ ಪುಷ್ಟಿ.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


“ಬಾಬಿಲೋನಿಯದ ಬೇಲ್‍ದೇವತೆಯನ್ನು ದಂಡಿಸುವೆನು. ಅದು ನುಂಗಿದ್ದನ್ನು ಅದರ ಬಾಯಿಂದಲೇ ಕಕ್ಕಿಸುವೆನು. ಪ್ರವಾಹವಾಗಿ ಅಲ್ಲಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಬಾರರು. ಆ ಬಾಬಿಲೋನಿನ ಪೌಳಿಗೋಡೆ ಇನ್ನು ಬಿದ್ದುಹೋಗುವುದು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಜೆರುಸಲೇಮಿನಿಂದ ಕೊಳ್ಳೆಹೊಡೆದು ತಂದಿದ್ದ ಸಾಮಾನುಗಳನ್ನು ನೆಬೂಕದ್ನೆಚ್ಚರನು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದನು.


ಅಲ್ಲಿ ಅದನ್ನು ದಾಗೋನನ ಮಗ್ಗುಲಲ್ಲೇ ಇಟ್ಟರು.


ಕೊಟ್ಟವರಾರು ಯಕೋಬನ್ನು ಸುಲಿಗೆಗೆ, ಇಸ್ರಯೇಲನ್ನು ಕೊಳ್ಳೆಗೆ? ಯಾವ ಸರ್ವೇಶ್ವರನಿಗೆ ದ್ರೋಹಮಾಡಿದ್ದೇವೋ ಆತನೇ ಅಲ್ಲವೇ? ಜನರು ಆತನ ಮಾರ್ಗದಲ್ಲಿ ನಡೆಯದೇ, ಆತನ ಉಪದೇಶವನ್ನು ಕೇಳದೆಹೋದರಲ್ಲವೆ?


ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನಿಗೆ ವಿರುದ್ಧ ದಂಗೆಯೆದ್ದನು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೇ ವರ್ಷದಲ್ಲಿ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.


ಬಳಿಕ ನಾನು ಯಾಜಕರಿಗೂ ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಸರ್ವೇಶ್ವರನ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.


ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ಬಾಬಿಲೋನಿಗೆ ಕೊಂಡು ಒಯ್ದ ಸರ್ವೇಶ್ವರನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.


ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು.


“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


ಅಂತೆಯೇ, ದಾನಿಯೇಲನನ್ನು ರಾಜ ಸನ್ನಿಧಿಗೆ ಬರಮಾಡಲಾಯಿತು. ರಾಜನು ಅವನಿಗೆ: “ರಾಜನಾದ ನನ್ನ ತಂದೆ ಜುದೇಯದಿಂದ ಖೈದಿಯಾಗಿ ತಂದು ಸೆರೆಮಾಡಿದ ಯೆಹೂದ್ಯರಲ್ಲಿ ದಾನಿಯೇಲ್ ಎಂಬುವನು ನೀನೋ?


ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು