Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:21 - ಕನ್ನಡ ಸತ್ಯವೇದವು C.L. Bible (BSI)

21 ದಾನಿಯೇಲನು ರಾಜ ಸೈರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದಾನಿಯೇಲನು ರಾಜನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆ ವರ್ಷದ ತನಕ ಅರಸನ ಸೇವಕನಾಗಿ ಮುಂದುವರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದಾನಿಯೇಲನು ರಾಜ ಕೋರೆಷನ ಆಳಿಕೆಯ ಮೊದಲನೆಯ ವರ್ಷದ ತನಕ ಅಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:21
4 ತಿಳಿವುಗಳ ಹೋಲಿಕೆ  

ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲೂ ಪರ್ಷಿಯನಾದ ಸೈರೆಷನ ಆಳ್ವಿಕೆಯಲ್ಲೂ ಪ್ರವರ್ಧಿಸುತ್ತಾ ಬಾಳಿದನು.


ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.


ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು