Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:3 - ಕನ್ನಡ ಸತ್ಯವೇದವು C.L. Bible (BSI)

3 ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಯೇಲರಲ್ಲಿ, ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ ಕೆಲವು ಯುವಕರನ್ನು ಇಲ್ಲಿಗೆ ಕರೆದು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯನಾದ ಅಶ್ಪೆನಜನಿಗೆ - ನೀನು ಇಸ್ರಾಯೇಲ್ಯರಲ್ಲಿ ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಅರಸನಾದ ನೆಬೂಕದ್ನೆಚ್ಚರನು ಅಶ್ಪೆನಜನಿಗೆ ಆದೇಶಕೊಟ್ಟನು. ಅಶ್ಪೆನಜನು ಅರಸನ ಸೇವೆಯಲ್ಲಿದ್ದ ಎಲ್ಲಾ ಕಂಚುಕಿಯರಿಗೆ ಮುಖಂಡನಾಗಿದ್ದನು. ಅರಸನು ಕೆಲವು ಜನ ಇಸ್ರೇಲರನ್ನು ತನ್ನ ಅರಮನೆಗೆ ಸೇರಿಸಬೇಕೆಂದು ಅಶ್ಪೆನಜನಿಗೆ ಹೇಳಿದನು. ನೆಬೂಕದ್ನೆಚ್ಚರನು ಇಸ್ರೇಲರ ರಾಜವಂಶೀಯರನ್ನು ಮತ್ತು ಪ್ರಮುಖ ಮನೆತನದವರನ್ನು ತನ್ನ ಅರಮನೆಗೆ ಸೇರಿಸಬಯಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನು ತನ್ನ ಕಂಚುಕಿಯರ ಮುಖ್ಯಸ್ಥನಾದ ಅಶ್ಪೆನಜನ ಸಂಗಡ ಮಾತನಾಡಿ ಅವನು ಇಸ್ರಾಯೇಲರೊಳಗೆ ಕೆಲವರನ್ನು ಅರಸನ ಸಂತಾನದೊಳಗಿಂದಲೂ, ಪ್ರಧಾನರೊಳಗಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:3
6 ತಿಳಿವುಗಳ ಹೋಲಿಕೆ  

ನೀನು ಪಡೆದ ಮಕ್ಕಳಲ್ಲಿ ಕೆಲವರನ್ನು, ನಿನ್ನ ಸ್ವಂತ ಪುತ್ರರನ್ನು ತೆಗೆದುಕೊಂಡು ಹೋಗಿ ಬಾಬಿಲೋನಿಯರ ಅರಸರ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,” ಎಂದು ಹೇಳಿದನು.


ಅವನು ಯೆಹೋಯಾಖೀನನ್ನೂ ಅವನ ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ,


ಏಳನೆಯ ತಿಂಗಳಿನಲ್ಲಿ ಇಷ್ಮಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು. ಈತನು ರಾಜವಂಶದವನು, ಎಲೀಷಾಮನ ಮೊಮ್ಮಗನು, ನೆತನ್ಯನ ಮಗನು ಹಾಗು ಅರಸನ ಪದಾಧಿಕಾರಿಗಳಲ್ಲಿ ಒಬ್ಬನು. ಅಲ್ಲಿ ಗೆದಲ್ಯನೊಂದಿಗೆ ಅವರೆಲ್ಲರು ಊಟಮಾಡುತ್ತಿದ್ದಾಗ,


ನಿಮಗೆ ಗಂಡುಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವರು; ನಿಮ್ಮ ಬಳಿ ಅವರು ಇರರು.


ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಕೂಡಿಸಿಟ್ಟ ಎಲ್ಲವನ್ನು ಬಾಬಿಲೋನಿಯಾಗೆ ಕೊಂಡೊಯ್ಯುವ ದಿನ ಬರುವುದು; ಇಲ್ಲಿ ಏನೂ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು