Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:4 - ಕನ್ನಡ ಸತ್ಯವೇದವು C.L. Bible (BSI)

4 ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಂಗದೋಷವಿಲ್ಲದವರೂ ಸುಂದರರೂ ಸಮಸ್ತಶಾಸ್ತ್ರಜ್ಞರೂ ಪಂಡಿತರೂ ವಿದ್ಯಾನಿಪುಣರೂ ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕೆಂಬದಾಗಿ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅರಸನಾದ ನೆಬೂಕದ್ನೆಚ್ಚರನು ಆರೋಗ್ಯವಂತರೂ ಅಂಗದೋಷವಿಲ್ಲದವರೂ ಸುಂದರರೂ ಬುದ್ಧಿವಂತರೂ ವಿದ್ಯಾನಿಪುಣರೂ ಆಗಿದ್ದ ಯುವಕರನ್ನು ತನ್ನ ಸನ್ನಿಧಿಸೇವೆಗಾಗಿ ಆರಿಸಿಕೊಂಡು ಅವರಿಗೆ ಕಸ್ದೀಯ ಭಾಷೆಯನ್ನೂ ಬರವಣಿಗೆಯನ್ನೂ ಕಲಿಸಬೇಕೆಂದು ಆಜ್ಞೆ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:4
23 ತಿಳಿವುಗಳ ಹೋಲಿಕೆ  

ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.


ಅವನು ಈಜಿಪ್ಟರ ಸಕಲ ವಿದ್ಯೆಗಳಲ್ಲಿ ಪಾರಂಗತನಾಗಿ, ನಡೆಯಲ್ಲೂ ನುಡಿಯಲ್ಲೂ ಸಮರ್ಥನಾದನು.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಯೇಲರಲ್ಲೇ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ.


ಆಗ ಆ ಪಂಡಿತರು ಸನ್ನಿಧಿಯ ಮುಂದೆ, “ರಾಜರು ಕೇಳುವ ಸಂಗತಿಯನ್ನು ತಿಳಿಸಬಲ್ಲವನು ಈ ಲೋಕದಲ್ಲಿ ಯಾವನೂ ಇಲ್ಲ. ಎಷ್ಟೆಷ್ಟೋ ಬಲಿಷ್ಠರಾದ , ಪ್ರಬಲರಾದ ಯಾವ ಅರಸರೂ ಜೋಯಿಸನನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.


ಸುರಸುಂದರನಾದ ಮೋಶೆ ಜನಿಸಿದ್ದು ಈ ಸಂದರ್ಭದಲ್ಲೇ. ಅವನು ಮೂರು ತಿಂಗಳವರೆಗೆ ಮನೆಯಲ್ಲೇ ಬೆಳೆದನು.


ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.


ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ಬಳಿಕ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು, “ನೀವು ತಾಬೋರದಲ್ಲಿ ಕೊಂದು ಹಾಕಿದ ವ್ಯಕ್ತಿಗಳು ಹೇಗಿದ್ದರು?” ಎಂದು ಕೇಳಿದಾಗ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು,” ಎಂದು ಉತ್ತರಕೊಟ್ಟರು.


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು.


ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು.


ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ದಳಪತಿಗೆ, “ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಆರಾಮಾಯಿಕ ಭಾಷೆಯಲ್ಲಿ ಮಾತನಾಡಿ, ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರು ಭಾಷೆಯಲ್ಲಿ ಮಾತನಾಡಬೇಡಿ, ಅದು ಪೌಳಿಗೋಡೆಯ ಮೇಲಿರುವ ಎಲ್ಲರಿಗೂ ಅರ್ಥವಾಗುತ್ತದೆ,” ಎಂದರು.


ಇಸ್ರಯೇಲ್ ವಂಶವೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಗಮನದಿಂದ ಕೇಳು : “ನಾನು ಒಂದು ರಾಷ್ಟ್ರವನ್ನು ದೂರದಿಂದ ನಿನ್ನ ವಿರುದ್ಧ ಬರಮಾಡುವೆನು. ಅದು ಪ್ರಾಚೀನ ಹಾಗೂ ಪ್ರಬಲ ರಾಷ್ಟ್ರ. ಅದರ ಭಾಷೆ ನಿನಗೆ ತಿಳಿಯದು. ಅದು ಆಡುವ ಮಾತು ನಿನಗೆ ಅರ್ಥವಾಗದು.


ಅದು, ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ. ಈತನು ಅಹಷ್ವೇರೋಷನ ಮಗ, ಮೇದ್ಯ ವಂಶದವನು ಹಾಗು ಬಾಬಿಲೋನಿನ ರಾಜ್ಯದ ದೊರೆ.


“ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು.


ಈಜಿಪ್ಟ್ ದೇಶದ ಅರಸನಾದ ಫರೋಹನ ಆಸ್ಥಾನವನ್ನು ಸೇರಿದಾಗ ಜೋಸೆಫನಿಗೆ ಮೂವತ್ತು ವರ್ಷ ವಯಸ್ಸು. ಜೋಸೆಫನು ಫರೋಹನ ಸನ್ನಿಧಿಯಿಂದ ಹೊರಟು ಈಜಿಪ್ಟ್ ದೇಶದಲ್ಲೆಲ್ಲ ಸಂಚಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು