ದಾನಿಯೇಲ 1:5 - ಕನ್ನಡ ಸತ್ಯವೇದವು C.L. Bible (BSI)5 ಇದಲ್ಲದೆ, “ಇನ್ನು ಮುಂದಕ್ಕೆ ಅವರು ಸನ್ನಿಧಿಸೇವಕರಾಗುವಂತೆ, ನನ್ನ ಭೋಜನಪದಾರ್ಥಗಳನ್ನು ಹಾಗೂ ನಾನು ಕುಡಿಯುವ ದ್ರಾಕ್ಷಾರಸವನ್ನು ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನಪದಾರ್ಥಗಳನ್ನೂ ತಾನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ದಿನವಹಿ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರುಷ ಪೋಷಿಸಬೇಕು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅರಸನಾದ ನೆಬೂಕದ್ನೆಚ್ಚರನು ದಿನಾಲು ಆ ತರುಣರಿಗೆ ತಾನು ಸೇವಿಸುವ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ಕೊಡುತ್ತಿದ್ದನು. ಅವರನ್ನು ತನ್ನ ಸೇವಕರನ್ನಾಗಿ ಮಾಡಿಕೊಳ್ಳುವ ಉದ್ದೇಶದಿಂದ ಮೂರು ವರ್ಷಗಳ ತರಬೇತಿ ಕೊಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅರಸನು ರಾಜಭೋಜನದಲ್ಲಿಯೂ, ತಾನು ಕುಡಿಯುವ ದ್ರಾಕ್ಷಾರಸದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿಸಿದನು. ಹೀಗೆ ಅವರು ಮೂರು ವರ್ಷಗಳ ಕಾಲ ಪೋಷಿಸಲಾದ ಮೇಲೆ ಅರಸನ ಸನ್ನಿಧಿಯ ಸೇವಕರಾಗುವರು. ಅಧ್ಯಾಯವನ್ನು ನೋಡಿ |