Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:8 - ಕನ್ನಡ ಸತ್ಯವೇದವು C.L. Bible (BSI)

8 ಆದರೆ ದಾನಿಯೇಲನು ತಾನು ರಾಜನ ಭೋಜನ ಪದಾರ್ಥಗಳನ್ನು ತಿಂದು ಹಾಗೂ ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನೇ ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿಕೊಂಡನು. ಕಂಚುಕಿಯರ ನಾಯಕನಿಗೆ, “ಕ್ಷಮಿಸು, ನಾನು ಅಶುದ್ಧನಾಗಲಾರೆ,” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಾನಿಯೇಲನು ತಾನು ರಾಜನ ಭೋಜನಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ - ನಾನು ಅಶುದ್ಧನಾಗಲಾರೆ, ಕ್ಷವಿುಸು ಎಂದು ವಿಜ್ಞಾಪಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದ್ದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:8
22 ತಿಳಿವುಗಳ ಹೋಲಿಕೆ  

ಮಾಡು ನನ್ನ ಹೃದಯ ದುರಾಚಾರವನು ಮೆಚ್ಚದಂತೆ I ಕಾಪಾಡು ದುರ್ಜನರೊಡಗೂಡಿ ಕೇಡನು ಮಾಡದಂತೆ I ನೋಡು ದುರುಳರೌತಣಗಳಲಿ ನಾ ಪಾಲ್ಗೊಳ್ಳದಂತೆ II


ಆದರೆ ಅವನು ಯಾರ ಒತ್ತಾಯಕ್ಕೂ ಮಣಿಯದೆ ದೃಢಚಿತ್ತನಾಗಿದ್ದು, ತನಗೆ ನಿಶ್ಚಿತಳಾದ ಕನ್ಯೆಯೊಡನೆ ಮದುವೆಯಾಗುವುದು ಬೇಡವೆಂದು ತೀರ್ಮಾನಿಸಿಕೊಂಡರೆ ಮತ್ತು ತನ್ನ ಸಂಯಮವನ್ನು ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವನು ಅಂತೆಯೇ ಮಾಡಲಿ. ಹೀಗೆ, ಮದುವೆ ಆಗದೆ ಇರುವುದು ಒಳ್ಳೆಯದು.


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ಇದಲ್ಲದೆ, “ಇನ್ನು ಮುಂದಕ್ಕೆ ಅವರು ಸನ್ನಿಧಿಸೇವಕರಾಗುವಂತೆ, ನನ್ನ ಭೋಜನಪದಾರ್ಥಗಳನ್ನು ಹಾಗೂ ನಾನು ಕುಡಿಯುವ ದ್ರಾಕ್ಷಾರಸವನ್ನು ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು,” ಎಂದು ಆಜ್ಞಾಪಿಸಿದನು.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


ಅವರು ಬಲಿಕೊಟ್ಟ ಕೊಬ್ಬು ಮಾಂಸವನು ತಿಂದವರೆಲ್ಲಿ? ಸಮರ್ಪಿಸಿದ ಪಾನಗಳನು ಕುಡಿದ ದೇವತೆಗಳೆಲ್ಲಿ? ಅವರೇ ನಿಮಗೆ ನೆರವಾಗಲಿ, ನಿಮ್ಮನೀಗ ಕಾಯಲಿ!


ಬಾಳ್‍ಪೆಗೋರ ದೇವತೆಯ ಊಳಿಗದವರಾದರು I ಸತ್ತವರಿಗರ್ಪಿಸಿದ ಬಲಿಯನು ಉಣ್ಣುವವರಾದರು II


ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


ಒಡೆಯನ ರುಚಿಪದಾರ್ಥಗಳನ್ನು ಬಯಸಬೇಡ. ಅವುಗಳಲ್ಲಿ ಮರೆಮೋಸ ಅಡಗಿರಲು ಸಾಧ್ಯ.


ಕುಡಿದುಕೊಂಡೇ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ತಮ್ಮ ದೇವರುಗಳನ್ನು ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು