ದಾನಿಯೇಲ 10:12 - ಕನ್ನಡ ಸತ್ಯವೇದವು C.L. Bible (BSI)12 ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಮೇಲೆ ಅವನು ನನಗೆ - ದಾನಿಯೇಲನೇ, ಭಯಪಡಬೇಡ, ನೀನು [ದೈವಸಂಕಲ್ಪವನ್ನು] ವಿಮರ್ಶಿಸುವದಕ್ಕೂ ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿವಿುತ್ತವೇ ನಾನು ಬಂದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ. ಅಧ್ಯಾಯವನ್ನು ನೋಡಿ |