Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:17 - ಕನ್ನಡ ಸತ್ಯವೇದವು C.L. Bible (BSI)

17 ನನ್ನೊಡೆಯನ ದಾಸನಾದ ನನ್ನಂಥವನು ಎನ್ನೊಡೆಯರಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ಈಗ ಶಕ್ತಿಯನ್ನೆಲ್ಲಾ ಕಳೆದುಕೊಂಡಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲವಾಗಿದೆ,” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸುರೇ ಇಲ್ಲ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸ್ವಾಮೀ, ನಾನು ನಿಮ್ಮ ಸೇವಕನಾದ ದಾನಿಯೇಲ. ನಾನು ನಿಮ್ಮ ಸಂಗಡ ಹೇಗೆ ಮಾತನಾಡಲಿ. ನನಗೆ ಶಕ್ತಿಯೇ ಇಲ್ಲದಂತಾಗಿದೆ. ಉಸಿರಾಡುವುದೂ ಕಷ್ಟವಾಗಿದೆ” ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ಒಡೆಯನ ದಾಸನಾದ ನನ್ನಂಥವನು ನನ್ನ ಒಡೆಯನಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ, ಉಸಿರಾಡಿಸಲೂ ಆಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:17
11 ತಿಳಿವುಗಳ ಹೋಲಿಕೆ  

ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿಗೆ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ಪ್ರಭುವಿಗೆ ಸರ್ವೇಶ್ವರ ಹೇಳಿದ್ದಾರೆ,’ ಎಂದು ದಾವೀದನೇ ಪವಿತ್ರಾತ್ಮಪ್ರೇರಣೆಯಿಂದ ಹೇಳಿದ್ದಾನಲ್ಲಾ!


ಆತನು ಸರ್ವೇಶ್ವರನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಸ್ವಾಮಿ, ಸರ್ವೇಶ್ವರಾ, ಸರ್ವೇಶ್ವರನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.


ಮತ್ತೆ ಅವರು, “ಆದರೆ ನೀನು ನನ್ನ ಮುಖವನ್ನು ನೋಡಲಾಗದು. ಏಕೆಂದರೆ ನನ್ನನ್ನು ನೋಡಿದ ಮಾನವ ಜೀವಂತನಾಗಿ ಉಳಿಯಲಾರ,” ಎಂದು ಹೇಳೀದರು.


‘ನಿಮ್ಮ ದಾಸ ಯಕೋಬನು ನಮ್ಮ ಹಿಂದೆ ಬರುತ್ತಿದ್ದಾರೆ,’ ಎನ್ನಿರಿ” ಎಂದು ಆಜ್ಞಾಪಿಸಿದನು. ಯಕೋಬನು ತನ್ನೊಳಗೆ, “ನನಗೆ ಮುಂಚಿತವಾಗಿ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ನಾನು ಅವನನ್ನು ಭೇಟಿ ಆಗುತ್ತೇನೆ. ಆಗ ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು,” ಎಂದುಕೊಂಡನು.


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು