Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:20 - ಕನ್ನಡ ಸತ್ಯವೇದವು C.L. Bible (BSI)

20 ಅವನು ನನಗೆ ಹೀಗೆಂದು ಹೇಳಿದ: “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೇ? ಈಗ ನಾನು ಪರ್ಷಿಯ ರಾಜ್ಯದ ಕಾವಲುದೂತನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಗ್ರೀಕ್ ರಾಜ್ಯದ ಕಾವಲುದೂತನು ಎದುರುಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ನನಗೆ ಹೀಗೆ ಹೇಳಿದನು - ನಾನು ನಿನ್ನ ಬಳಿಗೆ ಏಕೆ ಬಂದೆನೆಂಬದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್‍ರಾಜ್ಯದ ದಿವ್ಯಪಾಲಕನು ಎದುರುಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಅವನು, “ದಾನಿಯೇಲನೇ, ನಾನು ಏಕೆ ಬಂದಿದ್ದೇನೆಂಬುದು ನಿನಗೆ ಗೊತ್ತಿಲ್ಲವೇ? ತಕ್ಷಣ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಹೋದಮೇಲೆ ಗ್ರೀಕ್ ರಾಜ್ಯದ ದಿವ್ಯಪಾಲಕನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು, “ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ. ಈಗ ನಾನು ಪಾರಸಿಯದ ರಾಜಪುತ್ರನ ಸಂಗಡ ಯುದ್ಧಮಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ, ಗ್ರೀಕಿನ ರಾಜಕುಮಾರನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:20
8 ತಿಳಿವುಗಳ ಹೋಲಿಕೆ  

ಆ ಹೋತ ಗ್ರೀಕ್ ರಾಜ್ಯ. ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.


ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಅನಂತರ ನಾನು ನೋಡುತ್ತಿರುವಾಗಲೆ ಚಿರತೆಯ ಹಾಗಿದ್ದ ಮತ್ತೊಂದು ಮೃಗ ಕಾಣಿಸಿತು. ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಗಳಂತಿರುವ ನಾಲ್ಕು ರೆಕ್ಕೆಗಳಿದ್ದವು. ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನ ಕೊಡಲಾಯಿತು.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ನಿರಾಶೆಗೊಳಿಸಿ ಅದನ್ನು ಕಟ್ಟದ ಹಾಗೆ ಬೆದರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು