Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:21 - ಕನ್ನಡ ಸತ್ಯವೇದವು C.L. Bible (BSI)

21 ಸತ್ಯಗ್ರಂಥದಲ್ಲಿ ಲಿಖಿತವಾದುದನ್ನು ಈಗ ನಿನಗೆ ತಿಳಿಸುತ್ತೇನೆ. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಕಾವಲುದೂತನಾದ ಮಿಕಾಯೇಲನ ಹೊರತು ನನಗೆ ಬೆಂಬಲಿಗರಾಗತಕ್ಕವರು ಇನ್ನಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 (ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು.) ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನು ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದಾನಿಯೇಲನೇ, ನಾನು ಹೋಗುವ ಮುಂಚೆ ‘ಸತ್ಯಶಾಸನ’ದಲ್ಲಿ ಏನು ಬರೆದಿದೆ ಎಂಬುದನ್ನು ನಿನಗೆ ಹೇಳುವೆನು. ಆ ದುಷ್ಟದೂತರೊಂದಿಗೆ ಹೋರಾಡುವಲ್ಲಿ ಮಿಕಾಯೇಲನ ಹೊರತು ನನಗೆ ಬೆಂಬಲವಾಗತಕ್ಕವರು ಇನ್ಯಾರೂ ಇಲ್ಲ. ಮಿಕಾಯೇಲನು ನಿಮ್ಮ ಜನರ ಪಾಲಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಸತ್ಯ ಗ್ರಂಥದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುತ್ತೇನೆ. ನಿಮ್ಮ ರಾಜಕುಮಾರನಾದ ಮೀಕಾಯೇಲನ ಹೊರತು ಮತ್ತೆ ಯಾರೂ ಅವರಿಗೆ ವಿರೋಧವಾಗಿ ನನಗೆ ಸಹಕಾರ ಕೊಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:21
14 ತಿಳಿವುಗಳ ಹೋಲಿಕೆ  

ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.


ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.


ಇದಕ್ಕೂ ಪ್ರವಾದಿಗಳ ಪ್ರವಚನಗಳಿಗೂ ಪೂರ್ಣಸಾಮರಸ್ಯವಿದೆ.


“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”


ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.


ಕನಸಿನಲ್ಲಿ ತಿಳಿಸಲಾದ ಉದಯಾಸ್ತಮಾನಗಳ ವಿಷಯ ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹುದೂರದ ಕಾಲದ್ದು,” ಎಂದು ಹೇಳಿದನು.


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


“ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡಲು ಈಗ ಬಂದಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು