Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:7 - ಕನ್ನಡ ಸತ್ಯವೇದವು C.L. Bible (BSI)

7 ಆ ದರ್ಶನವನ್ನು ಕಂಡವನು ದಾನಿಯೇಲನಾದ ನಾನೊಬ್ಬನೇ. ನನ್ನೊಂದಿಗೆ ಇದ್ದವರು ಅದನ್ನು ಕಾಣಲಿಲ್ಲ. ಅವರು ಭಯಭ್ರಾಂತರಾಗಿ ಓಡಿಹೋಗಿ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದಾನಿಯೇಲನೆಂಬ ನನಗೆ ಮಾತ್ರ ಆ ದರ್ಶನವಾಯಿತು. ನನ್ನ ಜೊತೆಯಲ್ಲಿದ್ದವರಿಗೆ ಆ ದರ್ಶನ ಕಾಣಿಸಲಿಲ್ಲವಾದರೂ ಅವರು ಭಯಪಟ್ಟರು. ಅವರು ಭಯದಿಂದ ಓಡಿಹೋಗಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಜನರು ಆ ದರ್ಶನವನ್ನು ನೋಡಲಿಲ್ಲ. ಆದರೆ ಅವರು ಭಯಭ್ರಾಂತರಾಗಿ ಓಡಿಹೋಗಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:7
8 ತಿಳಿವುಗಳ ಹೋಲಿಕೆ  

ಸೌಲನೊಡನೆ ಪ್ರಯಾಣ ಮಾಡುತ್ತಿದ್ದವರಿಗೆ ಆ ವಾಣಿ ಕೇಳಿಸಿತೇ ಹೊರತು, ಯಾರೂ ಕಾಣಿಸಲಿಲ್ಲ. ಅವರು ಸ್ತಬ್ಧರಾದರು.


ನನ್ನೊಡನೆ ಇದ್ದವರಿಗೆ ಬೆಳಕೇನೋ ಕಾಣಿಸಿತು. ಆದರೆ ನನ್ನೊಡನೆ ಮಾತಾಡುತ್ತಿದ್ದ ವಾಣಿ ಅವರಿಗೆ ಕೇಳಿಸಲಿಲ್ಲ.


ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು.


ಆ ನೋಟ ಎಷ್ಟು ಭಯಂಕರವಾಗಿತ್ತೆಂದರೆ, ಮೋಶೆ ಕೂಡ, “ನಾನು ಭಯದಿಂದ ನಡುಗುತ್ತಿದ್ದೇನೆ,” ಎಂದು ಹೇಳುವಂತಾಯಿತು!


ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.


“ನರಪುತ್ರನೇ, ನೀನು ಅನ್ನವನ್ನು ಅಂಜಿಕೆಯಿಂದ ತಿಂದು, ನೀರನ್ನು ನಡುಕದಿಂದ ಕುಡಿದು, ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು:


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು