ದಾನಿಯೇಲ 10:8 - ಕನ್ನಡ ಸತ್ಯವೇದವು C.L. Bible (BSI)8 ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ಏಕಾಕಿಯಾಗಿ ಉಳಿದು ಆ ಅದ್ಭುತದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಿತ್ರಾಣನಾದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನೊಬ್ಬನೇ ಅಲ್ಲಿದ್ದೆ. ನಾನು ಆ ದರ್ಶನವನ್ನು ನೋಡುತ್ತಲೇ ಇದ್ದೆ. ಅದರಿಂದ ನನಗೆ ಭಯವಾಯಿತು. ನಾನು ದುರ್ಬಲನಾದೆ. ನನ್ನ ಮುಖವು ಸತ್ತವರ ಮುಖದಂತೆ ಬಿಳುಪೇರಿತು; ನಾನು ನಿಸ್ಸಹಾಯಕನಾದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಒಬ್ಬನೇ ಉಳಿದು, ಈ ಅದ್ಭುತ ದರ್ಶನವನ್ನು ನೋಡಿದೆನು. ನನ್ನಲ್ಲಿ ತ್ರಾಣವು ಇರಲಿಲ್ಲ. ನನ್ನ ಮುಖವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು. ಅಧ್ಯಾಯವನ್ನು ನೋಡಿ |