Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:10 - ಕನ್ನಡ ಸತ್ಯವೇದವು C.L. Bible (BSI)

10 ಆಮೇಲೆ ಉತ್ತರರಾಜನ ಮಕ್ಕಳು ಯುದ್ಧಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯ ಬೆಳೆದು ತುಂಬಿತುಳುಕುವ ಪ್ರವಾಹದಂತೆ ಹಬ್ಬಿಕೊಳ್ಳುವುದು. ಅವರು ಮತ್ತೆ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಮೇಲೆ ಅವನ ಮಕ್ಕಳು ಯುದ್ಧಸನ್ನಾಹಮಾಡಿ ವ್ಯೂಹವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು; ಆ ಸೈನ್ಯವು ಮುಂದರಿದು ತುಂಬಿ ತುಳುಕಿ ಹಬ್ಬಿಕೊಳ್ಳುವದು; ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಉತ್ತರದ ರಾಜನ ಮಗನು ಯುದ್ಧದ ಸಿದ್ಧತೆಯನ್ನು ಮಾಡುವನು. ಅವರಿಬ್ಬರೂ ಸೇರಿ ಒಂದು ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ರಭಸದಿಂದ ಬಂದ ಪ್ರವಾಹದಂತೆ ದೇಶದಲ್ಲೆಲ್ಲ ಸಂಚರಿಸಿ ಯುದ್ಧ ಮಾಡುತ್ತಾ ದಕ್ಷಿಣ ರಾಜನ ದುರ್ಗದವರೆಗೆ ನುಗ್ಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:10
10 ತಿಳಿವುಗಳ ಹೋಲಿಕೆ  

ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯೊಂದು ಅದರ ಸ್ಥಾನದಲ್ಲಿ ನಿಲ್ಲುವುದು. ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು, ಅವನ ದುರ್ಗದೊಳಗೆ ನುಗ್ಗಿ, ಅಲ್ಲಿನವರಿಗೆ ಮಾಡುವಷ್ಟೂ ಮಾಡಿ ಗೆಲ್ಲುವನು.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ರಾಷ್ಟ್ರಗಳ ಕಣ್ಣಿಗೆ ಬಾಬಿಲೋನ್ ಭೀಕರವಾಗಿಬಿಟ್ಟಿದೆ, ಸಮುದ್ರವೆ ಬಾಬಿಲೋನಿಯದ ಮೇಲೆ ನುಗ್ಗಿಬಿಟ್ಟಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ಅವನ ಮೃಷ್ಟಾನ್ನ ತಿಂದವರೇ ಅವನಿಗೆ ಎರಡು ಬಗೆಯುವರು. ಅವನ ಸೈನ್ಯವು ಕೊಚ್ಚಿಕೊಂಡುಹೋಗುವುದು. ಬಹುಜನರು ಹತರಾಗಿ ಬೀಳುವರು.


ಅವನನ್ನು ಎದುರಿಸುವ ದೊಡ್ಡ ದೊಡ್ಡ ಸೈನ್ಯಗಳು ಹಾಗು ದೇವರ ಪ್ರಧಾನ ಯಾಜಕನು ಅವನ ಸೈನ್ಯ ಪ್ರವಾಹಕ್ಕೆ ಸಿಕ್ಕಿ ಅದರಲ್ಲಿ ಮುಳುಗಿ ನಾಶವಾಗುವರು.


ದುರ್ಗದಂತೆ ಎತ್ತರವಾಗಿರುವ ಅದರ ಕೋಟೆಕೊತ್ತಲಗಳನ್ನು ಕೆಳಕ್ಕೆ ಕೆಡವಿ ನೆಲಸಮಮಾಡುವರು. ಅದು ಧೂಳು ಪಾಲಾಗುವುದು.


ಬಳಿಕ ಉತ್ತರರಾಜನು ದಕ್ಷಿಣರಾಜನ ರಾಜ್ಯದ ಮೇಲೆ ದಾಳಿಮಾಡುವನು. ಆದರೆ ಅವನು ಸ್ವದೇಶಕ್ಕೆ ಹಿಂದಿರುಗಬೇಕಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು