Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:11 - ಕನ್ನಡ ಸತ್ಯವೇದವು C.L. Bible (BSI)

11 ಆಗ ದಕ್ಷಿಣರಾಜನು ಕ್ರೋಧದಿಂದುರಿಯುತ್ತಾ ಹೊರಟುಬಂದು ಉತ್ತರರಾಜನ ಸಂಗಡ ಯುದ್ಧಮಾಡುವನು. ಉತ್ತರರಾಜನು ಮಹಾವ್ಯೂಹವನ್ನು ಕಟ್ಟಿದರೂ ಅದೆಲ್ಲವು ದಕ್ಷಿಣರಾಜನ ಕೈವಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ದಕ್ಷಿಣ ದಿಕ್ಕಿನ ರಾಜನು ಕ್ರೋಧದಿಂದ ಉರಿಯುತ್ತಾ ಹೊರಟು ಬಂದು, ಉತ್ತರ ದಿಕ್ಕಿನ ರಾಜನ ಸಂಗಡ ಯುದ್ಧ ಮಾಡುವನು. ಉತ್ತರ ದಿಕ್ಕಿನ ರಾಜನು ಮಹಾವ್ಯೂಹವನ್ನು ಕಟ್ಟಿದರೂ, ಅದೆಲ್ಲಾ ದಕ್ಷಿಣ ದಿಕ್ಕಿನ ರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ದಕ್ಷಿಣರಾಜನು ಕ್ರೋಧದಿಂದುರಿಯುತ್ತಾ ಹೊರಟುಬಂದು ಉತ್ತರರಾಜನ ಸಂಗಡ ಯುದ್ಧಮಾಡುವನು; ಉತ್ತರರಾಜನು ಮಹಾವ್ಯೂಹವನ್ನು ಕಟ್ಟಿದರೂ ಅದೆಲ್ಲಾ ದಕ್ಷಿಣರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ದಕ್ಷಿಣದ ರಾಜನು ಕೋಪದಿಂದ ಕೆಂಡವಾಗುವನು. ಅವನು ಉತ್ತರದ ರಾಜನ ವಿರುದ್ಧ ಹೋರಾಡುವದಕ್ಕಾಗಿ ಹೊರಬರುವನು. ಉತ್ತರದ ರಾಜನ ಹತ್ತಿರ ಅಪಾರವಾದ ಸೈನ್ಯವಿದ್ದರೂ ಅವನು ಯುದ್ಧದಲ್ಲಿ ಸೋಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಮಹಾ ಸೈನ್ಯವನ್ನು ಕೂಡಿಸಿದನು. ಉತ್ತರದ ಅರಸನ ಸಂಗಡ ಯುದ್ಧಮಾಡುವನು. ಆದರೆ ಆ ಮಹಾ ಸೈನ್ಯವು ದಕ್ಷಿಣ ಅರಸನ ಕೈವಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:11
13 ತಿಳಿವುಗಳ ಹೋಲಿಕೆ  

ಆ ಟಗರನ್ನು ಸಮೀಪಿಸುವುದನ್ನು ನಾನು ಗಮನಿಸಿದೆ. ಟಗರಿನ ವಿರುದ್ಧ ಮಹಾರೌದ್ರದಿಂದ ಉರಿಯುತ್ತಾ ಅದರ ಮೇಲೆ ಎರಗಿ ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದನ್ನು ಎದುರಿಸುವ ಶಕ್ತಿ ಯಾವುದೂ ಆ ಟಗರಿಗೆ ಇರಲಿಲ್ಲ. ಹೋತ ಟಗರನ್ನು ನೆಲಕ್ಕೆ ಕೆಡವಿ ತುಳಿದುಹಾಕಿತು. ಅದರ ಕೈಯಿಂದ ಟಗರನ್ನು ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.


“ದಕ್ಷಿಣ ದಿಕ್ಕಿನ ರಾಜನು ಮತ್ತು ಅವನ ದಳವಾಯಿಗಳಲ್ಲಿ ಒಬ್ಬನು ಶಕ್ತಿಶಾಲಿಗಳಾಗುವರು. ದಳವಾಯಿ ರಾಜನಿಗಿಂತ ಶಕ್ತಿಶಾಲಿಯಾಗಿ ಪ್ರಭುತ್ವಕ್ಕೆ ಬರುವನು. ಅವನ ರಾಜ್ಯ ದೊಡ್ಡ ರಾಜ್ಯವಾಗುವುದು.


ಹೀಗಿರಲು ಪೂರ್ವದಿಂದ ಮತ್ತು ಉತ್ತರದಿಂದ ಬರುವ ಸುದ್ದಿ ಅವನನ್ನು ಬಾಧಿಸುವುದು. ಅವನು ಅತಿರೋಷಗೊಂಡು ಬಹುಜನರನ್ನು ಧ್ವಂಸಿಸಿ ನಿರ್ನಾಮಮಾಡಲು ಹೊರಡುವನು.


ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.


ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.


ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು